Friday, August 28, 2026
Homeರಾಜ್ಯಅಂಗವಿಕಲರ ಕ್ಷೇತ್ರದ ಸಮಾಜ ಸೇವೆಗೆ ‘ಭಾರತಭೂಷಣ ರಾಷ್ಟ್ರೀಯ ಪ್ರಶಸ್ತಿ’ ಗೌರವ

ಅಂಗವಿಕಲರ ಕ್ಷೇತ್ರದ ಸಮಾಜ ಸೇವೆಗೆ ‘ಭಾರತಭೂಷಣ ರಾಷ್ಟ್ರೀಯ ಪ್ರಶಸ್ತಿ’ ಗೌರವ

ಬೆಂಗಳೂರು: 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಜನತಾಪ್ರಭ ದಿನಪತ್ರಿಕೆ ವತಿಯಿಂದ ಆಗಸ್ಟ್ 16, 2026ರ ಭಾನುವಾರ ಬೆಂಗಳೂರಿನ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ ಭವನದ ಅಕ್ಕಮಹಾದೇವಿ ಸಭಾಂಗಣದಲ್ಲಿ “ಸೈನಿಕರೊಂದಿಗೆ ಸ್ವಾತಂತ್ರೋತ್ಸವ” ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಅಂಗವಿಕಲರ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಸಮಾಜ ಸೇವೆಯನ್ನು ಗುರುತಿಸಿ, ಸಮಾಜಮುಖಿ ಕಾರ್ಯಗಳಿಗೆ ನೀಡಿದ ಕೊಡುಗೆಯನ್ನು ಪರಿಗಣಿಸಿ “ಭಾರತಭೂಷಣ ರಾಷ್ಟ್ರೀಯ ಪ್ರಶಸ್ತಿ” ನೀಡಿ ಗೌರವಿಸಲಾಯಿತು.

ಅಂಗವಿಕಲರ ಹಕ್ಕುಗಳು, ಅವರ ಕಲ್ಯಾಣ ಹಾಗೂ ಸಬಲೀಕರಣಕ್ಕಾಗಿ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ಸಮಾಜ ಸೇವೆಯನ್ನು ಗುರುತಿಸಿ ಈ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಸಂತಸ ಹಾಗೂ ಹೆಮ್ಮೆಯ ಸಂಗತಿಯಾಗಿದೆ.

ಪ್ರಶಸ್ತಿ ಸ್ವೀಕರಿಸಿದ ಸಂದರ್ಭದಲ್ಲಿ ಮಾತನಾಡಿದ ಅವರು, “ಅಂಗವಿಕಲರ ಸೇವೆಯೇ ನನ್ನ ಬದುಕಿನ ಪ್ರಮುಖ ಉದ್ದೇಶ. ನನ್ನ ಸೇವೆಯನ್ನು ಗುರುತಿಸಿ ‘ಭಾರತಭೂಷಣ ರಾಷ್ಟ್ರೀಯ ಪ್ರಶಸ್ತಿ’ ನೀಡಿ ಗೌರವಿಸಿರುವ ಜನತಾಪ್ರಭ ದಿನಪತ್ರಿಕೆಯ ಆಡಳಿತ ಮಂಡಳಿ ಹಾಗೂ ಆಯೋಜಕರಿಗೆ ಕೋಟಿ ಕೋಟಿ ಪ್ರಣಾಮಗಳು. ಈ ಗೌರವವು ಮುಂದಿನ ದಿನಗಳಲ್ಲಿ ಇನ್ನಷ್ಟು ಅಂಗವಿಕಲರಿಗಾಗಿ ಸೇವೆ ಸಲ್ಲಿಸಲು ಮತ್ತಷ್ಟು ಪ್ರೇರಣೆ ನೀಡಿದೆ” ಎಂದು ಕೃತಜ್ಞತೆ ಸಲ್ಲಿಸಿದರು.

ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸೈನಿಕರನ್ನು ಸ್ಮರಿಸುವುದರ ಜೊತೆಗೆ, ಸಮಾಜದ ಅಂಚಿನಲ್ಲಿರುವವರ ಬದುಕಿನಲ್ಲಿ ಬೆಳಕು ಮೂಡಿಸುವ ಸಮಾಜ ಸೇವಕರನ್ನು ಗೌರವಿಸಿದ “ಸೈನಿಕರೊಂದಿಗೆ ಸ್ವಾತಂತ್ರೋತ್ಸವ” ಕಾರ್ಯಕ್ರಮವು ಅರ್ಥಪೂರ್ಣವಾಗಿ ಮೂಡಿಬಂದಿತು.

“ಗೌರವವು ಅಂತ್ಯವಲ್ಲ; ಇನ್ನಷ್ಟು ಸೇವೆ ಸಲ್ಲಿಸುವ ಜವಾಬ್ದಾರಿಯ ಆರಂಭ” ಎಂಬ ಸಂದೇಶದೊಂದಿಗೆ ಪ್ರಶಸ್ತಿ ಪುರಸ್ಕೃತರು ಮುಂದಿನ ದಿನಗಳಲ್ಲಿಯೂ ಅಂಗವಿಕಲರ ಕಲ್ಯಾಣಕ್ಕಾಗಿ ನಿರಂತರವಾಗಿ ಕಾರ್ಯನಿರ್ವಹಿಸುವ ಸಂಕಲ್ಪ ವ್ಯಕ್ತಪಡಿಸಿದರು.

ಹೆಚ್ಚಿನ ಸುದ್ದಿ