Friday, July 10, 2026
Homeರಾಜಕೀಯಎಚ್.ಡಿ.ಕುಮಾರಸ್ವಾಮಿ- ಬಿ.ವೈ.ವಿಜಯೇಂದ್ರ ಭೇಟಿ

ಎಚ್.ಡಿ.ಕುಮಾರಸ್ವಾಮಿ- ಬಿ.ವೈ.ವಿಜಯೇಂದ್ರ ಭೇಟಿ

ಬೆಂಗಳೂರು: ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಬೆಂಗಳೂರಿನಲ್ಲಿ ಇಂದು ಕೇಂದ್ರ ಸಚಿವ, ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ರಾಜ್ಯ ರಾಜಕೀಯದ ಪ್ರಚಲಿತ ವಿದ್ಯಮಾನಗಳ ಕುರಿತು ಸಮಗ್ರವಾಗಿ ಚರ್ಚಿಸಿದರು.

ರೈತವಿರೋಧಿ, ಜನವಿರೋಧಿ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಂದಿನ ಹೋರಾಟದ ರೂಪುರೇμÉಗಳು, ಮುಂಬರುವ ಚುನಾವಣಾ ಸವಾಲುಗಳನ್ನು ಮತ್ತಷ್ಟು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಎರಡೂ ಪಕ್ಷಗಳ ಮೈತ್ರಿಯನ್ನು ಬಲಪಡಿಸಿ, ಒಂದಾಗಿ ಮುನ್ನಡೆಯುವ ನಿಟ್ಟಿನಲ್ಲಿ ಸುದೀರ್ಘವಾಗಿ ಸಮಾಲೋಚನೆ ನಡೆಸಿದರು.

ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಹೆಚ್ಚಿನ ಸುದ್ದಿ