ಗಂಗಾವತಿ: ನಗರದ ಎಂ.ಎಸ್ (AMS) ಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವು ಇತ್ತೀಚೆಗೆ ಅತ್ಯಂತ ಅರ್ಥಪೂರ್ಣವಾಗಿ ಜರುಗಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ರಾಷ್ಟ್ರೀಯ ಶಿಕ್ಷಣ ತಜ್ಞ ಧನಂಜಯ ಅವರು ವಿದ್ಯಾರ್ಥಿಗಳಿಗೆ ಮುಂಬರುವ ಪರೀಕ್ಷಾ ಸಿದ್ಧತೆ ಹಾಗೂ ಎಸ್ಎಸ್ಎಲ್ಸಿ ನಂತರದ ಶೈಕ್ಷಣಿಕ ಹಾದಿಯ ಬಗ್ಗೆ ಅಮೂಲ್ಯ ಮಾರ್ಗದರ್ಶನ ನೀಡಿದರು.
ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಧನಂಜಯ ಅವರು, “ಎಸ್ಎಸ್ಎಲ್ಸಿ ಎಂಬುದು ವಿದ್ಯಾರ್ಥಿ ಜೀವನದ ಅತ್ಯಂತ ಪ್ರಮುಖ ಘಟ್ಟ. ಕಳೆದ 10 ವರ್ಷಗಳ ಕಲಿಕೆಯ ಸಾರವನ್ನು ಬದುಕಿನ ಉನ್ನತ ಗುರಿ ಸಾಧನೆಗಾಗಿ ಬಳಸಿಕೊಳ್ಳುವ ಸಮಯವಿದು. ವಿದ್ಯಾರ್ಥಿಗಳು ಈ ಹಂತದಲ್ಲಿ ಯಾವುದೇ ಗೊಂದಲಕ್ಕೆ ಒಳಗಾಗದೆ, ತಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ದೂರದೃಷ್ಟಿಯಿಂದ ಉನ್ನತ ವ್ಯಾಸಂಗದತ್ತ ದೃಢ ನಿರ್ಧಾರ ಕೈಗೊಳ್ಳಬೇಕು” ಎಂದು ಕಿವಿಮಾತು ಹೇಳಿದರು.
ಇದೇ ಸಂದರ್ಭದಲ್ಲಿ, ಪರೀಕ್ಷೆಗೆ ಸಜ್ಜಾಗುತ್ತಿರುವ ಶಾಲೆಯ ‘ಸೂಪರ್ 30 ಯೋಧರಿಗೆ’ ಶಾಲೆಯ ಕಾರ್ಯದರ್ಶಿಗಳಾದ ರುಬೇನ್ ಮಿರಾಜಕರ್ ಅವರು ಪರೀಕ್ಷಾ ಸಲಕರಣೆಗಳನ್ನು ಕೊಡುಗೆಯಾಗಿ ನೀಡಿ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ರೆವರೆಂಡ್ ಯೇಸುದಾಸ್, ಶಾಲೆಯ ಅಧ್ಯಕ್ಷರಾದ ಶ್ರೀಮತಿ ಚನ್ನಮ್ಮ, ಚಂದ್ರಕಾಂತ್ ಸರ್ ಹಾಗೂ ಮುಖ್ಯೋಪಾಧ್ಯಾಯರಾದ ಮಂಜುನಾಥ್ ಸೇರಿದಂತೆ ಶಾಲೆಯ ಶಿಕ್ಷಕ ವೃಂದ ಮತ್ತು ಪೋಷಕರು ಉಪಸ್ಥಿತರಿದ್ದರು
