ಬೋಸೆದೇವರಹಟ್ಟಿ: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬೋಸೆದೇವರಹಟ್ಟಿ ಗ್ರಾಮದಲ್ಲಿ ಗೌರಿ-ಗಣೇಶ ಹಬ್ಬವನ್ನು ಸಡಗರ ಹಾಗೂ ಭಕ್ತಿಭಾವದಿಂದ ಆಚರಿಸಲಾಯಿತು. ಗ್ರಾಮದ ಪ್ರಮುಖ ಸ್ಥಳಗಳಲ್ಲಿ ಗೌರಿ-ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು. ಬಳಿಕ ಅಲಂಕೃತ ವಾಹನದಲ್ಲಿ ಗಣೇಶ ಮೂರ್ತಿಯನ್ನು ಕೊಂಡೊಯ್ದು ಗ್ರಾಮದ ಪ್ರಮುಖ ಬೀದಿ-ಬೀದಿಗಳಲ್ಲಿ ಅದ್ಧೂರಿ ಮೆರವಣಿಗೆ ನಡೆಸಲಾಯಿತು.
ಮೆರವಣಿಗೆ ಸಾಗಿದ ಮಾರ್ಗದುದ್ದಕ್ಕೂ ಭಕ್ತರು ಗಣೇಶನಿಗೆ ಪೂಜೆ ಸಲ್ಲಿಸಿ, ಭಕ್ತಿಭಾವ ಮೆರೆದರು. ಬಳಿಕ ನಾಯಕನಹಟ್ಟಿ ಸಮೀಪದ ದೊಡ್ಡಕೆರೆಯಲ್ಲಿ ಗಣೇಶ ಮೂರ್ತಿಯನ್ನು ಭಕ್ತಿಭಾವದಿಂದ ವಿಸರ್ಜಿಸಲಾಯಿತು. ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಬೋಸೆದೇವರಹಟ್ಟಿ ಗ್ರಾಮದಲ್ಲಿ ದಿನವಿಡೀ ಹಬ್ಬದ ಸಂಭ್ರಮದ ವಾತಾವರಣ ಮನೆ ಮಾಡಿತ್ತು .
ಈ ಸಂದರ್ಭದಲ್ಲಿ ರಾಜಣ್ಣ, ತಿಪ್ಪೇಸ್ವಾಮಿ, ತಿಪ್ಪಮ್ಮ, ಅರುಣ್, ಕಿರಣ್, ಜೀವನ್, ನಿಶನ್, ಗಿರಿಜಮ್ಮ, ಅಜಯ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.
