ಶೈಕ್ಷಣಿಕ ಅಭಿವೃದ್ಧಿಗಿಂತ ಶ್ರೇಷ್ಠ ಸೇವೆ ಮತ್ತೊಂದಿಲ್ಲ.
ಚನ್ನಮ್ಮನ ಕಿತ್ತೂರು: ಕಿತ್ತೂರು ಕ್ಷೇತ್ರಕ್ಕೆ ಶೈಕ್ಷಣಿಕ ಕೊಡುಗೆ: 22 ಕೋಟಿ ವೆಚ್ಚದ ರಾಣಿ ಚೆನ್ನಮ್ಮ ವಸತಿ ಶಾಲೆಗೆ ಭೂಮಿಪೂಜೆ ಮತ್ತು ಶಂಕುಸ್ಥಾಪನೆ ನೆರವೇರಿಸಲಾಯಿತು,
ಈ ಶಾಲೆಯು ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಆಶಯದೊಂದಿಗೆ ಕಿತ್ತೂರು ತಾಲೂಕಿನ ಕುಲುಮನಟ್ಟಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸುತ್ತಿರುವ ‘ಕಿತ್ತೂರು ರಾಣಿ ಚನ್ನಮ್ಮ’ ವಸತಿ ಶಾಲೆ’ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಎಂದು ಶಾಸಕರು ತಿಳಿಸಿದರು…
ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಸುಮಾರು 22 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಸುಸಜ್ಜಿತ ಶಾಲಾ ಸಂಕೀರ್ಣ ತಲೆ ಎತ್ತಲಿದೆ ಎಂದರು ,
ಕಿತ್ತೂರು ಮತಕ್ಷೇತ್ರದ ಶಾಸಕರಾದ ಬಾಬಾಸಾಹೇಬ್ ಪಾಟೀಲ್ ಅವರು ಕುಲುಮನಟ್ಟಿ ಗ್ರಾಮದ 8 ಎಕರೆ ವಿಸ್ತೀರ್ಣದ ಜಾಗದಲ್ಲಿ ಶಾಲಾ ಕಟ್ಟಡಕ್ಕೆ ಭೂಮಿಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಚನ್ನಮ್ಮನ ಕಿತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಸಂಗನಗೌಡ ಪಾಟೀಲ ಮಾತನಾಡಿ “ಕ್ಷೇತ್ರದಲ್ಲಿ ಸುಸಜ್ಜಿತ ವಸತಿ ಶಾಲೆಗಳ ಕೊರತೆಯಿಂದಾಗಿ ವಿದ್ಯಾರ್ಥಿಗಳು ಬಾಡಿಗೆ ಕಟ್ಟಡಗಳಲ್ಲಿ ವಿದ್ಯಾಭ್ಯಾಸ ಮಾಡುವಂತಾಗಿತ್ತು. ಈ ಸಮಸ್ಯೆಯನ್ನು ಹೋಗಲಾಡಿಸಲು ಈ ಬೃಹತ್ ಯೋಜನೆ ನಮ್ಮ ನೆಚ್ಚಿನ ಶಾಸಕರು ಕೈಗೆತ್ತಿಕೊಳ್ಳಿದ್ದಾರೆ ಕಾರ್ಮಿಕರ ಮಕ್ಕಳಿಗಾಗಿ ಮತ್ತೊಂದು ವಸತಿ ಶಾಲೆ ನಿರ್ಮಿಸಲು ಸನ್ಮಾನ್ಯ ಶಾಸಕರು ಯೋಜನೆ ರೂಪಿಸಿಕೊಂಡಿದ್ದಾರೆ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಮುಂಚೂಣಿ ಘಟಕದ ಅಧ್ಯಕ್ಷರು ಕಾರ್ಯಕರ್ತರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಹಾಗೂ ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು…
ಈ ವಸತಿ ಶಾಲೆಯು ಪೂರ್ಣಗೊಂಡ ನಂತರ ಕಿತ್ತೂರು ಕ್ಷೇತ್ರದ ನೂರಾರು ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಹಾಗೂ ವಸತಿ ಸೌಲಭ್ಯ ದೊರೆಯಲಿದ್ದು, ಶೈಕ್ಷಣಿಕ ಕ್ರಾಂತಿಗೆ ಇದು ಸಾಕ್ಷಿಯಾಗಲಿದೆ ಎಂದು ತಿಳಿಸಿದರು…

ಸಂಪಾದಕರು: ರಾಮಚಂದ್ರಪ್ಪ ಪೂಜೇರ
