Wednesday, August 12, 2026
Homeಜಿಲ್ಲಾ ಸುದ್ದಿಗಳುದೇವರ ಹಿಪ್ಪರಗಿಯಲ್ಲಿ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಪ್ರಭುಲಿಂಗ ಲಿಂಗದಹಳ್ಳಿ ಪತ್ರಿಕಾಗೋಷ್ಠಿ: ಸಚಿವ ಎಂ.ಬಿ....

ದೇವರ ಹಿಪ್ಪರಗಿಯಲ್ಲಿ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಪ್ರಭುಲಿಂಗ ಲಿಂಗದಹಳ್ಳಿ ಪತ್ರಿಕಾಗೋಷ್ಠಿ: ಸಚಿವ ಎಂ.ಬಿ. ಪಾಟೀಲ್ ಕಾರ್ಯಕ್ರಮದ ಯಶಸ್ಸಿಗೆ ಕರೆ..

ದೇವರ ಹಿಪ್ಪರಗಿ: ಮುಂಬರುವ ಏಪ್ರಿಲ್ 2 ರಂದು ದೇವರ ಹಿಪ್ಪರಗಿ ವಿಧಾನಸಭಾ ಕ್ಷೇತ್ರಕ್ಕೆ ರಾಜ್ಯದ ಪ್ರಭಾವಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ. ಬಿ. ಪಾಟೀಲ್ ಅವರ ಆಗಮನದ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಡಾ. ಪ್ರಭುಲಿಂಗ ಲಿಂಗದಹಳ್ಳಿ ಅವರು ಇಂದು ಪತ್ರಿಕಾಗೋಷ್ಠಿ ನಡೆಸಿದರು.
ಸಂಘಟನೆಗೆ ಹೊಸ ಚೈತನ್ಯ:
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಡಾ. ಪ್ರಭುಲಿಂಗ ಲಿಂಗದಹಳ್ಳಿಯವರು, “ದೇವರ ಹಿಪ್ಪರಗಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಸದೃಢಗೊಳಿಸಲು ಮತ್ತು ಮುಂಬರುವ ಚುನಾವಣಾ ಸವಾಲುಗಳನ್ನು ಎದುರಿಸಲು ಸಚಿವ ಎಂ.ಬಿ. ಪಾಟೀಲ್ ಅವರ ಮಾರ್ಗದರ್ಶನ ಅತಿ ಮುಖ್ಯವಾಗಿದೆ. ಕ್ಷೇತ್ರದಲ್ಲಿ ಪಕ್ಷದ ಸಂಘಟನೆ ಅತ್ಯಂತ ಚುರುಕಾಗಿ ನಡೆಯುತ್ತಿದ್ದು, ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಕಂಡುಬರುತ್ತಿದೆ,” ಎಂದು ತಿಳಿಸಿದರು.
ಬೃಹತ್ ಕಾರ್ಯಕರ್ತರ ಸಮಾವೇಶ:
“ದಿನಾಂಕ 02-04-2026 ರಂದು ಮಧ್ಯಾಹ್ನ 1 ಗಂಟೆಗೆ ದೇವರ ಹಿಪ್ಪರಗಿಯ ಪರದೇಶಿ ಮಠದ ಆವರಣದಲ್ಲಿ ಬೃಹತ್ ಕಾರ್ಯಕರ್ತರ ಸಭೆ ನಡೆಯಲಿದೆ. ಈ ಸಭೆಯಲ್ಲಿ ಸಚಿವರು ಬೂತ್ ಮಟ್ಟದ ಸಂಘಟನೆಯ ಬಗ್ಗೆ ಚರ್ಚಿಸಲಿದ್ದಾರೆ. ಕ್ಷೇತ್ರದ ಪ್ರತಿಯೊಬ್ಬ ನಿಷ್ಠಾವಂತ ಕಾರ್ಯಕರ್ತರು ಈ ಶಕ್ತಿ ಪ್ರದರ್ಶನದಲ್ಲಿ ಭಾಗವಹಿಸಿ ಸಮಾವೇಶವನ್ನು ಯಶಸ್ವಿಗೊಳಿಸಬೇಕು,” ಎಂದು ಅವರು ಮನವಿ ಮಾಡಿದರು.
ಸರ್ಕಾರದ ಸಾಧನೆಗಳ ಪ್ರಚಾರ:
ರಾಜ್ಯ ಸರ್ಕಾರದ ಜನಪರ ಯೋಜನೆಗಳು ಮತ್ತು ಅಭಿವೃದ್ಧಿ ಕಾರ್ಯಗಳನ್ನು ಮನೆಮನೆಗೆ ತಲುಪಿಸುವ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ. ಸಚಿವರ ಭೇಟಿಯು ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಲಿದ್ದು, ಈ ನಿಟ್ಟಿನಲ್ಲಿ ಪಕ್ಷದ ಮುಖಂಡರು ಒಗ್ಗಟ್ಟಿನಿಂದ ಶ್ರಮಿಸುತ್ತಿದ್ದೇವೆ ಎಂದು ಡಾ. ಪ್ರಭುಲಿಂಗ ಲಿಂಗದಹಳ್ಳಿ ವಿವರಿಸಿದರು.
ಗಣ್ಯರ ಉಪಸ್ಥಿತಿ:
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಶೀರ್ ಶಠ್ ಬೇಪಾರಿ, ಬಾಳನಗೌಡ್ ಪಾಟೀಲ್ ಹಾಗೂ ಕ್ಷೇತ್ರದ ಹಿರಿಯ ಮುಖಂಡರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಹೆಚ್ಚಿನ ಸುದ್ದಿ