Tuesday, February 10, 2026
Homeಕ್ರೈಂ ಸುದ್ದಿಗಳುಪತ್ನಿಯನ್ನು ಹತ್ಯೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಂಡ ಪತಿ..

ಪತ್ನಿಯನ್ನು ಹತ್ಯೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಂಡ ಪತಿ..

ಕಿತ್ತೂರು: ತಾಲೂಕಿನ ತುರಕರ ಶೀಗಿಹಳ್ಳಿ ಗ್ರಾಮದಲ್ಲಿ ಪತಿ ಕ್ಷುಲಕ ಕಾರಣಕ್ಕೆ ಪತ್ನಿಯನ್ನು ಭೀಕರವಾಗಿ ಹತ್ಯೆಗೈದು, ಬಳಿಕ ತಾನು ಆತ್ಮಹತ್ಯೆಗೆ ಶರಣಾದ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ತುರುಕುರ ಶೀಗಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಶಿವಪ್ಪ ಸಣ್ಣಬಸಪ್ಪ ಕಂಬಳಿ (46) ಎಂಬಾತ ತನ್ನ ಪತ್ನಿ ಯಲ್ಲವ್ವ ಶಿವಪ್ಪ ಕಂಬಳಿ (40) ಅವರನ್ನು ಕೊಡಲಿಯಿಂದ ಕುತ್ತಿಗೆ ಹಾಗೂ ಬೆನ್ನಿಗೆ ಹಲ್ಲೆ ನಡೆಸಿ ಭೀಕರವಾಗಿ ಹತ್ಯೆಗೈದಿದ್ದಾನೆ. ಬಳಿಕ ಆತ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಇತ್ತೀಚೆಗೆ ಯಲ್ಲವ್ವ ಅವರ ತಾಯಿ ನಿಧನರಾಗಿದ್ದು, ಸಾವಿನ ನಂತರದ ಧಾರ್ಮಿಕ ವಿಧಿ ವಿಧಾನಗಳನ್ನು ಪೂರೈಸಲು ತನ್ನ ಮನೆಯಿಂದ ಅಡುಗೆ ಮಾಡಿಕೊಂಡು ತವರು ಮನೆಗೆ ಹೋಗುವುದಾಗಿ ಯಲ್ಲವ್ವ ತನ್ನ ಪತಿಗೆ ಹೇಳಿದ್ದಾಳೆ. ಆದರೆ ತವರು ಮನೆಗೆ ಹೋಗದಂತೆ ಪತಿ ಶಿವಪ್ಪ ತಾಕೀತು ಮಾಡಿದ್ದು, ಇದೇ ವಿಚಾರವಾಗಿ ದಂಪತಿಯ ನಡುವೆ ತೀವ್ರ ಗಲಾಟೆ ನಡೆದಿದೆ ಸಿಟ್ಟಿನಿಂದ ಪತಿ ಹತ್ಯೆ ಮಾಡಿದ್ದಾನೆ ಎಂದು ತಿಳಿದುಬಂದಿದೆ ಹತ್ಯೆ ಬಳಿಕ ತಾನು ಆತ್ಮಹತ್ಯೆಗೆ ಶರಣಾಗಿದ್ದಾನೆ…

ವಿಷಯ ತಿಳಿದ ಕಿತ್ತೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಬೆಳಗಾವಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಪ್ರಕರಣ ಕುರಿತು ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

ಸಂಪಾದಕರು: ರಾಮಚಂದ್ರಪ್ಪ ಪೂಜೇರ

ಹೆಚ್ಚಿನ ಸುದ್ದಿ