Friday, April 10, 2026
Homeಜಿಲ್ಲಾ ಸುದ್ದಿಗಳುಬಾಗಲಕೋಟೆ ಉಪ ಚುನಾವಣೆ: ಡಾ. ಪ್ರಭುಗೌಡ ಲಿಂಗದಳ್ಳಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಅಬ್ಬರದ ಪ್ರಚಾರ; ಅಭ್ಯರ್ಥಿ...

ಬಾಗಲಕೋಟೆ ಉಪ ಚುನಾವಣೆ: ಡಾ. ಪ್ರಭುಗೌಡ ಲಿಂಗದಳ್ಳಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಅಬ್ಬರದ ಪ್ರಚಾರ; ಅಭ್ಯರ್ಥಿ ಪರ ಜನಬೆಂಬಲಕ್ಕೆ ಕರೆ

ಬಾಗಲಕೋಟೆ: ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ಕಾಂಗ್ರೆಸ್ ಪಕ್ಷದ ಪ್ರಚಾರ ಕಾರ್ಯಕ್ಕೆ ಹಿರಿಯ ನಾಯಕ ಹಾಗೂ ಜನಪ್ರಿಯ ಮುಖಂಡರಾದ ಡಾ. ಪ್ರಭುಗೌಡ ಲಿಂಗದಳ್ಳಿ ಅವರು ಹೊಸ ಮೆರುಗು ನೀಡಿದ್ದಾರೆ. ಇಂದು ಕ್ಷೇತ್ರದ ಚಿಟಗಿನಕೊಪ್ಪ ಹಾಗೂ ದೇವಾಲಾಪೂರ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರವಾಗಿ ಡಾ. ಪ್ರಭುಗೌಡ ಅವರು ಅಬ್ಬರದ ಪ್ರಚಾರ ನಡೆಸಿ ಮತದಾರರ ಗಮನ ಸೆಳೆದರು.

ಡಾ. ಪ್ರಭುಗೌಡ ಲಿಂಗದಳ್ಳಿ ಅವರ ವಿಶೇಷ ಆಕರ್ಷಣೆ:
ಗ್ರಾಮಗಳಲ್ಲಿ ನಡೆದ ಜನಸಂಪರ್ಕ ಸಭೆಗಳಲ್ಲಿ ಭಾಗವಹಿಸಿದ ಡಾ. ಪ್ರಭುಗೌಡ ಲಿಂಗದಳ್ಳಿ ಅವರು ಮತದಾರರೊಂದಿಗೆ ಆತ್ಮೀಯವಾಗಿ ಸಂವಾದ ನಡೆಸಿದರು. ಅವರ ಸರಳ ನಡೆ ಹಾಗೂ ಅಭಿವೃದ್ಧಿ ಪರ ಚಿಂತನೆಗಳು ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ತುಂಬಿವೆ. “ಕ್ಷೇತ್ರದ ಸರ್ವತೋಮುಖ ಪ್ರಗತಿಗೆ ಕಾಂಗ್ರೆಸ್ ಬೆಂಬಲಿಸುವುದು ಅನಿವಾರ್ಯವಾಗಿದೆ. ಉಮೇಶ್ ಮೇಟಿ ಅವರನ್ನು ಗೆಲ್ಲಿಸುವ ಮೂಲಕ ಬಾಗಲಕೋಟೆಯ ಅಭಿವೃದ್ಧಿಗೆ ಹೊಸ ಶಕ್ತಿ ನೀಡಬೇಕು” ಎಂದು ಅವರು ಪ್ರಬಲವಾಗಿ ಪ್ರತಿಪಾದಿಸಿದರು.

ಗ್ರಾಮಸ್ಥರ ಭರ್ಜರಿ ಸ್ವಾಗತ:
ಚಿಟಗಿನಕೊಪ್ಪ ಮತ್ತು ದೇವಾಲಾಪೂರ ಗ್ರಾಮಗಳಿಗೆ ಡಾ. ಪ್ರಭುಗೌಡ ಲಿಂಗದಳ್ಳಿ ಅವರು ಭೇಟಿ ನೀಡಿದ ಸಂದರ್ಭದಲ್ಲಿ ಗ್ರಾಮಸ್ಥರು ಅದ್ಧೂರಿ ಸ್ವಾಗತ ಕೋರಿದರು. ಈ ವೇಳೆ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಲಾಭಗಳನ್ನು ಮನವರಿಕೆ ಮಾಡಿಕೊಟ್ಟ ಅವರು, ಬಿಜೆಪಿ ಆಡಳಿತದ ವಿಫಲತೆಗಳ ಬಗ್ಗೆಯೂ ಜನರಲ್ಲಿ ಜಾಗೃತಿ ಮೂಡಿಸಿದರು.

ಬಲಿಷ್ಠ ಸಂಘಟನೆ:
ಪ್ರಚಾರದಲ್ಲಿ ಡಾ. ಪ್ರಭುಗೌಡ ಲಿಂಗದಳ್ಳಿ ಅವರೊಂದಿಗೆ ಸ್ಥಳೀಯ ಪ್ರಮುಖ ಮುಖಂಡರು, ಗ್ರಾಮದ ಹಿರಿಯರು ಹಾಗೂ ಅಪಾರ ಸಂಖ್ಯೆಯ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು. ಡಾಕ್ಟರರ ಉಪಸ್ಥಿತಿಯು ಕ್ಷೇತ್ರದಾದ್ಯಂತ ಕಾಂಗ್ರೆಸ್ ಅಲೆ ಸೃಷ್ಟಿಸಲು ಪ್ರಮುಖ ಕಾರಣವಾಗಿದೆ ಎಂದು ಸ್ಥಳೀಯ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ

ಹೆಚ್ಚಿನ ಸುದ್ದಿ