Wednesday, May 27, 2026
Homeಬೆಂಗಳೂರುಶಿಕ್ಷಣ ಇಲಾಖೆ ಆದೇಶದ ವಿರುದ್ಧ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುತ್ತಿರುವ ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ...

ಶಿಕ್ಷಣ ಇಲಾಖೆ ಆದೇಶದ ವಿರುದ್ಧ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುತ್ತಿರುವ ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಶಾಲಾ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿ ಪ್ರತಿಭಟನೆ ; ಆಯುಕ್ತರಿಗೆ ದೂರು

ಮದರಸ ಹೆಸರಿನಲ್ಲಿ ಅನಧಿಕೃತವಾಗಿ ಶಾಲಾ ದಾಖಲಾತಿ ಮಾಡುತ್ತಿರುವ ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಶಾಲಾ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿ ಪ್ರತಿಭಟನೆ; ಆಯುಕ್ತರಿಗೆ ದೂರು

ಬೆಂಗಳೂರು, ಮೇ.25: ಶಾಲಾ ಶಿಕ್ಷಣ ಇಲಾಖೆ ಮತ್ತು ಹೈಕೋರ್ಟ್ ಆದೇಶವನ್ನು ಧಿಕ್ಕರಿಸಿ ಥಣಿ ಸಂದ್ರದ ಸಾಮರ ಇಂಟರ್ ನ್ಯಾಷನಲ್ ಸ್ಕೂಲ್ ನಿಂದ ಮದರಸ ಹೆಸರಿನಲ್ಲಿ ಅನಧಿಕೃತವಾಗಿ ಶಾಲಾ ದಾಖಲಾತಿ ಮಾಡಿಕೊಳ್ಳುತ್ತಿದ್ದು, ನೆಲದ ಕಾನೂನಿಗೆ ಗೌರವ ನೀಡದೇ, ದೇಶದ ಆಂತರಿಕ ಭದ್ರತೆಗೆ ಬೆದರಿಕೆಯಾಗಿ ಮಾರ್ಪಟ್ಟಿರುವ ಶಾಲಾ ಆಡಳಿತ ಮಂಡಳಿ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿ ಮುಂದೆ ಪೋಷಕರು ಪ್ರತಿಭಟನೆ ನಡೆಸಿದರು.

ಸರ್ಕಾರ ಮತ್ತು ನ್ಯಾಯಾಲಯದ ಆದೇಶವನ್ನು ಧಿಕ್ಕರಿಸಿರುವ ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪೋಷಕರಾದ ಅಬ್ದುಲ್ ರಹೀಮ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಈ ಸಂಬಂಧ ಸೂಕ್ತ ಕ್ರಮಕ್ಕಾಗಿ ಸರ್ಕಾರ ಮತ್ತು ಪೊಲೀಸರಿಗೆ ದೂರು ಸಲ್ಲಿಸಲಾಗಿದೆ. ಶಾಲಾ ಶಿಕ್ಷಣ ಇಲಾಖೆ ಆಯುಕ್ತರು, ನಿರ್ದೇಶಕರು ಮತ್ತಿತರೆ ಅಧಿಕಾರಿಗಳಿಗೆ ದೂರು ಸಲ್ಲಿಸಲಾಗಿದೆ. ನಕಲಿ ಶಿಕ್ಷಣ ಸಂಸ್ಥೆಗಳ ಹೆಸರಿನಲ್ಲಿ ಮುಗ್ಧ ಮಕ್ಕಳಿಗೆ ಹಾಗೂ ವಿಧ್ಯಾರ್ಥಿಗಳಿಗೆ ಮೋಸ, ವಂಚನೆ ಮಾಡುತ್ತಿದ್ದು, ದೇಶದ ಭದ್ರತೆ ಹಾಗೂ ಏಕತೆಗೆ ಧಕ್ಕೆ ತರುತ್ತಿರುವ ಅನಧಿಕೃತ ವಿದ್ಯಾಸಂಸ್ಥೆಗಳ ವಿರುದ್ದ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಥಣಿಸಂದ್ರದ ಜಾಮಿಯ ಮೊಹಮ್ಮದಿಯ ಮನ್ಸೂರ (ರಿ), ಜಾಮಿಯ ಮೊಹಮ್ಮದೀಯ ಎಜುಕೇಷನ್ ಸೊಸೈಟಿ ಮುಂಬೈ, ದಿ ಅಲ್ಜಾಮಿಯ ಮೊಹಮ್ಮದೀಯ ಎಜುಕೇಷನ್ ಸೊಸೈಟಿ ಮುಂಬೈಯ ಆಡಳಿತ ಮಂಡಳಿಯವರು ಶಿಕ್ಷಣ ಇಲಾಖೆಗೆ ಬೇರೆ ಬೇರೆ ಹೆಸರಿನಲ್ಲಿ ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ಮೋಸ ಮಾಡಿದ್ದಾರೆ. ಈ ಸಂಬಂಧ ಹೈಕೋರ್ಟ್ ಸೂಚನೆ ಮೇರೆಗೆ ಶಾಲಾ ಶಿಕ್ಷಣ ಮಂಡಳಿ ತ್ರಿಸದಸ್ಯ ಸಮಿತಿ ಶಿಫಾರಸ್ಸಿನಂತೆ ಶಾಲೆಯ ಮಾನ್ಯತೆಯನ್ನು ರದ್ದುಪಡಿಸಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಅಬ್ದುಲ್ ರಹೀಂ ಮಾತನಾಡಿ, ಜಾಮಿಯ ಮೊಹಮ್ಮದಿಯ ಎಜುಕೇಷನ್ ಸೊಸೈಟಿ (ಮುಂಬೈ)ಯವರು ಉಚ್ಛ ನ್ಯಾಯಾಲಯಕ್ಕೆ ತಪ್ಪು ಮಾಹಿತಿ ನೀಡಿದ್ದಕ್ಕೆ 5 ಲಕ್ಷ ರೂ ದಂಡ ವಿಧಿಸಿದೆ. ಶಾಲೆಯ ಮಾನ್ಯತೆ ನವೀಕರಣಾ ಪ್ರಮಾಣ ಪತ್ರ ಪಡೆಯುವ ಸಂದರ್ಭದಲ್ಲಿ ಆಡಳಿತ ಮಂಡಳಿಯ ಹೆಸರುಗಳನ್ನು ಬೇರೆ ಬೇರೆ ಹೆಸರುಗಳನ್ನು ನೀಡಿದೆ. ಜಾಮಿಯ ಮೊಹಮ್ಮದಿಯ ಮನ್ಸೂರ (ರಿ), ಜಾಮಿಯ ಮೊಹಮ್ಮದೀಯ ಎಜುಕೇಷನ್ ಸೊಸೈಟಿ, ದಿ ಅಲ್ಜಾಮಿಯ ಮೊಹಮ್ಮದೀಯ ಎಜುಕೇಷನ್ ಸೊಸ್ಯೆಟಿ ಮುಂಬೈ ಇವರ ಆಶ್ರಯದಲ್ಲಿ ಪುನಃ ಮದರಸಾ ಎಂಬ ನೆಪ ಹೇಳಿ ಮಗ್ದ ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದ್ದಾರೆ. ಈ ಮದರಸಾದಲ್ಲಿ ಅಮಾಯಕ ಮಕ್ಕಳನ್ನು ಹಿಂದೂ ಧರ್ಮದ ದೇವರನ್ನು ಅವಮಾನಿಸಿರುವ ಕೆಲವು ಅಂಶಗಳು ಯೂಟ್ಯೂಬ್ ನಲ್ಲಿ ಲಭ್ಯವಾಗಿವೆ. ಇಂತಹ ಅಶಾಂತಿ, ಭಯ ಹುಟ್ಟಿಸುವ, ಭಯಾನಕ, ಕೋಮುದ್ವೇಷ ನಿರ್ಮಿಸುವ ಕೆಲಸದಲ್ಲಿ ನಿರತವಾಗಿದೆ ಎಂದರು.

ಮದರಸಗೆ ಪ್ರವೇಶ ನೀಡುವ ಸಂಬಂಧ ನ್ಯಾಯಾಲಯದ ಆದೇಶಕ್ಕೆ ವಿರುದ್ಧವಾಗಿ ಉರ್ದು ದೈನಿಕದಲ್ಲಿ ಜಾಹೀರಾತು ನೀಡಿದೆ. ಇದಕ್ಕೆ ಕಡಿವಾಣ ಹಾಕಲು ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕಾರ್ಯಪ್ರವೃತ್ತರಾಗಬೇಕು. ಇಂತಹ ಭಾರತ ದೇಶದ ಕಾನೂನನ್ನು ಗೌರವಿಸದ ಅನೈತಿಕ ಹಾಗೂ ವಿರೋಧಿ ಚಟುವಟಿಕೆಗಳನ್ನು ನಡೆಸುತ್ತಿರುವ ವಿಷಜಂತುಗಳಿಂದಾಗಿ ಸಮಾಜಕ್ಕೆ ಹಾಗೂ ಮುಗ್ಧ ಮಕ್ಕಳಿಗೆ ತೊಂದರೆ ಆಗುವ ಸಾಧ್ಯತೆಗಳು ಹೆಚ್ಚಾಗಿವೆ. ಮುಂದಿನ ಶೈಕ್ಷಣಿಕ ವರ್ಷಕ್ಕೆ ಯಾವುದೇ ಶಾಲಾ ದಾಖಲಾತಿ ಪ್ರಾರಂಭಿಸಬಾರದೆಂದು ಆದೇಶ ನೀಡಿದೆ. ಶಿಕ್ಷಣ ಸಂಸ್ಥೆಗಳ ಹೆಸರಿನಲ್ಲಿ ಮದರಸಾ ಎಂಬ ಗೊಂದಲವನ್ನು ಸೃಷ್ಟಿಸಿ ಸುಳ್ಳು, ನಕಲಿ ದಾಖಲಾತಿಗಳನ್ನು ಸೃಷ್ಟಿಸಿಕೊಂಡು, ಮಕ್ಕಳನ್ನು ಹೊಸದಾಗಿ ದಾಖಲು ಮಾಡಿಕೊಂಡು ನಕಲಿ ರಸೀದಿ ನೀಡಿ ಮುಗ್ಧ ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಹೆಚ್ಚಿನ ಸುದ್ದಿ