Saturday, August 29, 2026
Homeರಾಜ್ಯಸರ್ಕಾರಿ ನೌಕರರ ಎಲ್ಲಾ ಬೇಡಿಕೆಗಳ ಈಡೇರಿಕೆಗಾಗಿ ಮುಖ್ಯಮಂತ್ರಿ ಗಳೊಂದಿಗೆ ಚರ್ಚಿಸಲಾಗುವುದು :-ಸಚಿವ ಮುನಿಯಪ್ಪ

ಸರ್ಕಾರಿ ನೌಕರರ ಎಲ್ಲಾ ಬೇಡಿಕೆಗಳ ಈಡೇರಿಕೆಗಾಗಿ ಮುಖ್ಯಮಂತ್ರಿ ಗಳೊಂದಿಗೆ ಚರ್ಚಿಸಲಾಗುವುದು :-ಸಚಿವ ಮುನಿಯಪ್ಪ

ಬೆಂಗಳೂರು.28
👇
ಎಸ್ಸಿ ಎಸ್ಟಿ ನೌಕರರ ಸಮನ್ವಯ ಸಮಿತಿಯ ವತಿಯಿಂದ ಆಯೊಜಿಸಿದ್ದ ರಾಜ್ಯ ಮಟ್ಟದ ಐಕ್ಯತಾ ಸಮಾವೇಶದಲ್ಲಿ ಮಾನ್ಯ ಸಮಾಜ ಕಲ್ಯಾಣ ಸಚಿವರಾದ ಕೆಹೆಚ್. ಮುನಿಯಪ್ಪ ರವರು ಭಾಗವಹಿಸಿ ಮಾತನಾಡಿದರು.

ರಾಜ್ಯದ ವಿವಿಧ ಇಲಾಖೆಗಳಲ್ಲಿ ಬಾಕಿ ಊಳಿದರಿವ 24ಸಾವಿರ ಬ್ಯಾಕ್ ಲಾಗ್ ಹುದ್ದೆಗಳ ಬರ್ತಿಗೆ ಕ್ರಮವಹಿಸಲಾಗುವುದು

ಎಸ್ಸಿ ಎಸ್ಟಿ ನೌಕರರ ಎಲ್ಲಾ ಬೇಡಿಕೆಗಳ ಈಡೇರಿಕೆಗೆ ನಾನು ನಮ್ಮ ಉಪಮುಖ್ಯಮಂತ್ರಿ ಪರಮೇಶ್ವರ್ ರವರು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತೇವೇ ಎಂದರು

ಆಂಜನೇಯ ಸಮಾಜ ಕಲ್ಯಾಣ ಸಚಿವನಿದ್ದಾಗ ಹೋಬಳಿಗೊಂದು ವಸತಿ ಶಾಲೆ ನಿರ್ಮಾಣ ಮಾಡಿದ ಫಲ ಇಂದು ಎಲ್ಕಾ ಮಕ್ಕಳು ಉತ್ತಮ ಶಿಕ್ಷಣವನ್ನು ಪಡೆಯಲು ಸಹಕಾರಿಯಾಗಿದೆ ನಾನು ಕೋಲಾರದಲ್ಲಿ ಸಂಸದನಾಗಿದ್ದಾಗ ಹೋಬಳಿಗೊಂದು ವಸತಿ ಶಾಲೆಯನ್ನು ನಿರ್ಮಿಸಿದೆ ಅದು ಇಂದು ಮಕ್ಕಳ ಗುಣಮಟ್ಟ ಶಿಕ್ಷಣವನ್ನು ಪಡೆಯಲು ಸಹಕಾರಿಯಾಗಿದೆ ಎಂದರು

ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ವಿವಿಧ ನಿಗಮಗಳ ಅನುದಾನದ ಹೆಚ್ಚಳದೊಂದಿಗೆ ಸಮುದಾಯದ ಅಭಿವೃದ್ಧಿ ಪಡಿಸಲಾಗುವುದು ಎಂದರು

ಈ ಸಂದರ್ಭದಲ್ಲಿ ಕೊಳ್ಳೇಗಾಲದ ಚೇತವನ ವಿಹಾರದ ಬೌದ್ಧಬಿಕ್ಕು ಪೂಜ್ಯ ಮನೋರಕ್ಕಿತ ಬಂತೇಜಿ ಅವರು, ಕೊಳ್ಳೇಗಾಲ ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಅವರು, ಮಾಜಿ ಸಚಿವರಾದ ಹೆಚ್.ಆಂಜನೇಯ, ಡಾ. ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಸಿ.ನರೇಂದ್ರ, ಕರ್ನಾಟಕ ರಾಜ್ಯ ಸರ್ಕಾರಿ ಎಸ್‌ಸಿ, ಎಸ್‌ಟಿ ನೌಕರರ ಸಮನ್ವಯ ಸಮಿತಿಯ ಅಧ್ಯಕ್ಷರಾದ ಡಿ.ಶಿವಶಂಕರ್ ರವರು ಉಪಸ್ಥಿತರಿದ್ದರು.

ಹೆಚ್ಚಿನ ಸುದ್ದಿ