Tuesday, May 26, 2026
Homeಟಾಪ್ ನ್ಯೂಸ್ಸಿಎಂಗೆ ಹೈಕಮಾಂಡ್ ಕರೆ ಬಗ್ಗೆ ನನಗೆ ಗೊತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಸಿಎಂಗೆ ಹೈಕಮಾಂಡ್ ಕರೆ ಬಗ್ಗೆ ನನಗೆ ಗೊತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಮೇ 24:

“ಹೈಕಮಾಂಡ್ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಗೆ ಕರೆದಿರುವ ಬಗ್ಗೆ ನನಗೆ ಗೊತ್ತಿಲ್ಲ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮದವರು, ದೆಹಲಿಗೆ ಬರುವಂತೆ ಹೈಕಮಾಂಡ್ ನಾಯಕರು ಸಿಎಂಗೆ ಕರೆ ನೀಡಿರುವುದರ ಬಗ್ಗೆ ಕೇಳಿದ ಪ್ರಶ್ನೆಗೆ ಶಿವಕುಮಾರ್ ಅವರು ಈ ರೀತಿ ಪ್ರತಿಕ್ರಿಯೆ ನೀಡಿದರು.

“ನಾನು ಈಗಷ್ಟೇ ಸಭೆ ಮುಗಿಸಿಕೊಂಡು ಬಂದಿದ್ದೇನೆ. ಈ ವಿಚಾರವಾಗಿ ನನಗೆ ಯಾವುದೇ ಮಾಹಿತಿ ಇಲ್ಲ” ಎಂದು ಹೇಳಿದರು.

ಸಿಎಂ ಅವರನ್ನು ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರೆದಿದ್ದಾರಾ ಅಥವಾ ನಾಯಕತ್ವ ಬದಲಾವಣೆ ಹಿನ್ನೆಲೆಯಲ್ಲಿ ಕರೆದಿದ್ದಾರಾ ಎಂದು ಕೇಳಿದಾಗ, ‘ನನಗೆ ಗೊತ್ತಿಲ್ಲ’ ಎಂದು ಡಿಸಿಎಂ ಅವರು ಹೇಳಿದರು.

ಹೆಚ್ಚಿನ ಸುದ್ದಿ