Thursday, July 30, 2026
Homeನಿಧನ ಸುದ್ದಿಹುಂಚ ಮುತ್ತಿನಕೆರೆಯಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ಯುವಕ ಸಾವು.!

ಹುಂಚ ಮುತ್ತಿನಕೆರೆಯಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ಯುವಕ ಸಾವು.!

ಶಿವಮೊಗ್ಗ: ರಿಪ್ಪನ್‌ಪೇಟೆ ಸಮೀಪದ ಹುಂಚ ಮುತ್ತಿನಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ಯುವಕನೊಬ್ಬ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಮಂಗಳವಾರ ವರದಿಯಾಗಿದೆ.ಮೃತ ಯುವಕನನ್ನು ಹುಂಚ ಮಂಜುನಾಥ ನಗರದ ನಿವಾಸಿ ಮಹೇಂದ್ರ ಎಂದು ಗುರುತಿಸಲಾಗಿದೆ.

ಮಹೇಂದ್ರ ಹಾಗೂ ಆತನ ಸ್ನೇಹಿತರೊಡನೆ ನಾಲ್ವರು ಸೇರಿ ಮುತ್ತಿನಕೆರೆಯಲ್ಲಿ ಮೀನು ಹಿಡಿಯುವ ಉದ್ದೇಶದಿಂದ ತೆರಳಿದ್ದರು ಎನ್ನಲಾಗಿದೆ. ಈ ಸಂದರ್ಭದಲ್ಲಿ ಕೆರೆಯ ದಂಡೆಯ ಮೇಲೆ ನಿಂತಿದ್ದ ಮಹೇಂದ್ರ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದಿದ್ದಾನೆ. ಈಜು ಬಾರದ ಕಾರಣ ಆತ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಮಾಹಿತಿ ತಿಳಿದ ಕೂಡಲೇ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಬಳಿಕ ಅಗ್ನಿಶಾಮಕ ದಳಕ್ಕೆ ನೀಡಲಾಗಿದೆ. ಹೊಸನಗರ ಅಗ್ನಿಶಾಮಕ ಠಾಣಾಧಿಕಾರಿ ಆನಂದಪ್ಪ ಎನ್. ಅವರ ನೇತೃತ್ವದ ಸಿಬ್ಬಂದಿಗಳಿಂದ ಕಾರ್ಯಾಚರಣೆ ನಡೆಸಿ, ಕೆರೆಯಿಂದ ಮಹೇಂದ್ರನ ಮೃತದೇಹವನ್ನು ಹೊರತೆಗೆದಿದ್ದಾರೆ.

ಈ ಕುರಿತು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ

ಹೆಚ್ಚಿನ ಸುದ್ದಿ