Monday, May 11, 2026
HomeUncategorizedಅಲ್ಪಸಂಖ್ಯಾತ ಸಮುದಾಯದವರಿಗೆ ಅರಿವು ವಿದ್ಯಾಭ್ಯಾಸ ಸಾಲಕ್ಕಾಗಿ ಅರ್ಜಿ ಆಹ್ವಾನ.

ಅಲ್ಪಸಂಖ್ಯಾತ ಸಮುದಾಯದವರಿಗೆ ಅರಿವು ವಿದ್ಯಾಭ್ಯಾಸ ಸಾಲಕ್ಕಾಗಿ ಅರ್ಜಿ ಆಹ್ವಾನ.

ವರದಿ: ಸೋಮಶೇಖರ ಲಮಾಣಿ

ಕಾರವಾರ, ಮೇ.11 :- ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ನಿಯಮಿತದಿಂದ ಪ್ರಸಕ್ತ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಜೈನ, ಸಿಖ್, ಬೌದ್ಧ ಹಾಗೂ ಪಾರ್ಸಿ (ಕ್ರಿಶ್ಚಿಯನ್ ಸಮುದಾಯವನ್ನು ಹೊರತುಪಡಿಸಿ) ಅರ್ಹ ವಿದ್ಯಾರ್ಥಿಗಳಿಗೆ ಸಾಲಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಪ್ರಸಕ್ತ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ/ನೀಟ್‌ನಲ್ಲಿ ಆಯ್ಕೆಯಾಗುವ ವೈದ್ಯಕೀಯ (ಎಂ.ಬಿ.ಬಿ.ಎಸ್.), ಬಿ.ಡಿ.ಎಸ್, ಬಿ.ಇ/ ಬಿ.ಟೆಕ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಬಿ.ಆಯುಶ್, ಫಾರ್ಮಸಿ, ಕೃಷಿ ವಿಜ್ಞಾನ ಮತ್ತು ಪಶು ವೈದ್ಯಕೀಯ ಇಂತಹ ಕೋರ್ಸಗಳಿಗೆ ಅರಿವು ಸಾಲ ಯೋಜನೆಯಡಿಯಲ್ಲಿ ಸಾಲ ಪಡೆಯಲು ಅಪೇಕ್ಷಿಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳೂ ನಿಗಮದ ವೆಬ್‌ಸೈಟ್

https://kmdconline.karnataka.gov.in/Portal/home ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಮೇ 30 ಕೊನೆಯ ದಿನಾಂಕವಾಗಿರುತ್ತದೆ ಎಂದು ಜಿಲ್ಲಾ ವ್ಯವಸ್ಥಾಪಕರು ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ) ವಾಸೀಂ ಮಂಜಿಲ್, 1ನೇ ಮಹಡಿ, ಹೈಚರ್ಚ ರಸ್ತೆ, ಕಾರವಾರ ಹಾಗೂ ದೂ.ಸಂ:08382-221180 ನ್ನು ಸಂಪರ್ಕಿಸಬೇಕೆಂದು ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಸುದ್ದಿ