Wednesday, August 12, 2026
Homeಜಿಲ್ಲಾ ಸುದ್ದಿಗಳುಉತ್ತರ ಕನ್ನಡಉತ್ತರ ಕನ್ನಡ ಜಿಲ್ಲೆಯ ಜೋಯಿಡಾ, ಹಳಿಯಾಳ, ಯಲ್ಲಾಪುರ, ಮುಂಡಗೋಡ, ಸಿರಸಿ ಹಾಗೂ ಸಿದ್ದಾಪುರ ತಾಲ್ಲೂಕುಗಳನ್ನು ಧಾರವಾಡ...

ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ, ಹಳಿಯಾಳ, ಯಲ್ಲಾಪುರ, ಮುಂಡಗೋಡ, ಸಿರಸಿ ಹಾಗೂ ಸಿದ್ದಾಪುರ ತಾಲ್ಲೂಕುಗಳನ್ನು ಧಾರವಾಡ ನ್ಯಾಯಾಲಯ ಪೀಠದ ವ್ಯಾಪ್ತಿಯಲ್ಲೇ ಮುಂದುವರಿಸುವುದು ಸೂಕ್ತ: ಶ್ರೀ ಶಿವರಾಮ ಹೆಬ್ಬಾರ್…

ರಾಜ್ಯದ ಮಂಗಳೂರಿನಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ಸಂಚಾರಿ ಪೀಠ ಸ್ಥಾಪನೆ ಕುರಿತು ಚರ್ಚೆಗಳು ನಡೆಯುತ್ತಿದ್ದು, ಈ ಸಂಬಂಧ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಹಾಗೂ ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿರುವ ಮಾಹಿತಿ ತಿಳಿದು ಬಂದಿದೆ.
ಈ ಹಿನ್ನೆಲೆಯಲ್ಲಿ, ಉತ್ತರ ಕನ್ನಡ ಜಿಲ್ಲೆಯ ಮೇಲ್ಘಟ್ಟ ಭಾಗದ ತಾಲ್ಲೂಕುಗಳನ್ನು ಮಂಗಳೂರು ಪೀಠಕ್ಕೆ ಸೇರ್ಪಡಿಸುವುದರಿಂದ ಉಂಟಾಗಬಹುದಾದ ತೊಂದರೆಗಳ ಬಗ್ಗೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು, ಮುಖ್ಯಮಂತ್ರಿ ಶ್ರೀ ಸಿದ್ಧರಾಮಯ್ಯ ಅವರಿಗೆ ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ.ಶಿವಕುಮಾರ ಅವರಿಗೆ ಶಾಸಕರು, ಹಿರಿಯ ನಾಯಕ ಶ್ರೀ ಆರ್.ವಿ.ದೇಶಪಾಂಡೆ ಹಾಗೂ ಕಾನೂನು ಸಚಿವ ಎಚ್.ಕೆ.ಪಾಟೀಲ್ಅವರಿಗೆ ಪತ್ರ ಬರೆಯಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಘಟ್ಟದ  ಮೇಲಿನ ತಾಲೂಕಗಳಾದ  ಜೋಯಿಡಾ, ದಾಂಡೇಲಿ, ಹಳಿಯಾಳ, ಯಲ್ಲಾಪುರ, ಮುಂಡಗೋಡ, ಸಿರಸಿ ಹಾಗೂ ಸಿದ್ದಾಪುರ ಸೇರಿವೆ. ಈ ಪ್ರದೇಶಗಳು ಮಂಗಳೂರಿನಿಂದ ದೂರವಿದ್ದು, ಆಡಳಿತಾತ್ಮಕ, ಆರ್ಥಿಕ ಹಾಗೂ ಐತಿಹಾಸಿಕವಾಗಿ ಧಾರವಾಡದೊಂದಿಗೆ ಹೆಚ್ಚಿನ ಸಂಪರ್ಕ ಹೊಂದಿವೆ. ಅಲ್ಲದೆ, ಈ ಭಾಗದ ಜನರು ಹಲವು ವರ್ಷಗಳಿಂದ ನ್ಯಾಯಾಂಗ ಸಂಬಂಧಿತ ವಿಚಾರಗಳಿಗೆ ಧಾರವಾಡ ಪೀಠವನ್ನೇ ಅವಲಂಬಿಸಿಕೊಂಡಿದ್ದಾರೆ.
ಆದ್ದರಿಂದ, ಸಾರ್ವಜನಿಕರ ಅನುಕೂಲತೆ, ನ್ಯಾಯಕ್ಕೆ ಸುಲಭ ಪ್ರವೇಶ ಹಾಗೂ ಪರಿಣಾಮಕಾರಿ ನ್ಯಾಯಾಂಗ ವ್ಯವಸ್ಥೆಯ ಹಿತದೃಷ್ಟಿಯಿಂದ ಮೇಲ್ಘಟ್ಟ ಭಾಗದ ತಾಲ್ಲೂಕುಗಳನ್ನು ಧಾರವಾಡ ಪೀಠದ ವ್ಯಾಪ್ತಿಯಲ್ಲೇ ಮುಂದುವರಿಸುವುದು ಸೂಕ್ತವಾಗಿದೆ.
ಹೀಗಾಗಿ, ಜೋಯಿಡಾ, ಹಳಿಯಾಳ, ಯಲ್ಲಾಪುರ, ಮುಂಡಗೋಡ, ಸಿರಸಿ ಹಾಗೂ ಸಿದ್ದಾಪುರ ತಾಲ್ಲೂಕುಗಳನ್ನು ಕರ್ನಾಟಕ ಉಚ್ಚ ನ್ಯಾಯಾಲಯದ ಧಾರವಾಡ ಪೀಠದ ಅಧೀನದಲ್ಲೇ ಮುಂದುವರಿಸಲು ಸರ್ಕಾರ ಮತ್ತು ಹೈಕೋರ್ಟ್ ಸೂಕ್ತ ತೀರ್ಮಾನ ಕೈಗೊಳ್ಳಬೇಕೆಂದು- ಶ್ರೀ ಶಿವರಾಮ ಹೆಬ್ಬಾರ್
ಶಾಸಕರು, ಯಲ್ಲಾಪುರ – ಮುಂಡಗೋಡ – ಬನವಾಸಿ ವಿಧಾನಸಭಾ ಕ್ಷೇತ್ರ ಇವರು ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತಿದ್ದಾರೆ..

ವರದಿಗಾರರು: ಬಸಯ್ಯ ತೋಟಯ್ಯನವರ

ಹೆಚ್ಚಿನ ಸುದ್ದಿ