Saturday, October 3, 2026
Homeರಾಜಕೀಯಕರಗಿನಕೊಪ್ಪ ಗ್ರಾಮದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಇಂದು ಯಲ್ಲಾಪುರದಲ್ಲಿ ಭಾರತೀಯ ಜನತಾ ಪಕ್ಷವನ್ನು ತೊರೆದು...

ಕರಗಿನಕೊಪ್ಪ ಗ್ರಾಮದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಇಂದು ಯಲ್ಲಾಪುರದಲ್ಲಿ ಭಾರತೀಯ ಜನತಾ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಯಲ್ಲಾಪುರ: ಮುಂಡಗೋಡ ತಾಲೂಕಿನ ಸಾಲಗಾಂವ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಗಿನಕೊಪ್ಪ ಗ್ರಾಮದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಇಂದು ಯಲ್ಲಾಪುರದಲ್ಲಿ ಭಾರತೀಯ ಜನತಾ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಸ್ಥಳೀಯ ಕಾಂಗ್ರೆಸ್ ಮುಖಂಡರಾದ ಡಿ.ಎಫ್. ಮಡ್ಲಿ ಹಾಗೂ ಬಾಬಣ್ಣ ಲಾಡನವರ್, ಘಟಕಾಧ್ಯಕ್ಷರಾದ ರಾಮಚಂದ್ರ ಗುಲ್ಯಾನವರ ಅವರ ನೇತೃತ್ವದಲ್ಲಿ ನಡೆದ ಸೇರ್ಪಡೆ ಕಾರ್ಯಕ್ರಮದಲ್ಲಿ ಬಿಜೆಪಿ ತೊರೆದ ಮುಖಂಡರು ಹಾಗೂ ಕಾರ್ಯಕರ್ತರನ್ನು ಕಾಂಗ್ರೆಸ್ ಪಕ್ಷದ ಶಾಲು ಹೊದಿಸಿ ಆತ್ಮೀಯವಾಗಿ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು.

ಬಸವರಾಜು ವಡ್ಡರ್, ಮಂಜುನಾಥ ಎಸ್. ವಡ್ಡರ್, ಗಣಪತಿ ದೋಡ್ಮನಿ, ಮಾಳತೇಶ್ ವಡ್ಡರ್, ಪರಮೇಶ್ವರ ವಡ್ಡರ್, ರಮೇಶ ವಡ್ಡರ್ ಹಾಗೂ ಕಿರಣ್ ದೋಡ್ಮನಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಹೆಚ್ಚಿನ ಸುದ್ದಿ