Friday, May 15, 2026
Homeಅಪಘಾತಕಾರು-ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿ, ಓರ್ವ ಸಾ.,.ವು

ಕಾರು-ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿ, ಓರ್ವ ಸಾ.,.ವು

ಹಳಿಯಾಳ:ಅತಿವೇಗ ಮತ್ತು ಅಜಾಗರೂಕತೆಯ ಚಾಲನೆಯಿಂದಾಗಿ ಕಾರು ಹಾಗೂ ಗೂಡ್ಸ್ ವಾಹನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃ,.,ತ.ಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಮನ್ನಳ್ಳಿ ಬಳಿ ಇಂದು ಬೆಳಿಗ್ಗೆ ಸಂಭವಿಸಿದೆ.

ಮಡಿಕೇರಿ ಮೂಲದ ಪ್ರಶಾಂತ್ ಸಿ. ಎಸ್. (36) ಮೃ,.,ತಪ. ಟ್ಟ ದುರ್ದೈವಿ. ಇವರು ವೃತ್ತಿಯಲ್ಲಿ ಗೌಂಡಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಮಡಿಕೇರಿ ಮತ್ತು ಮೈಸೂರು ಮೂಲದ ಕೃಷ್ಣಾ ಹೆಚ್. ಟಿ., ಎಮ್. ಟಿ. ಕುಮಾರ ಮತ್ತು ಸಂತೋಷಕುಮಾರ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಬೆಳಿಗ್ಗೆ ಸುಮಾರು 06:30ರ ಸುಮಾರಿಗೆ ರಾಜ್ಯ ಹೆದ್ದಾರಿ 93ರಲ್ಲಿ ಮನ್ನಳ್ಳಿಯ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ಹತ್ತಿರ ಈ ಅಪಘಾತ ಸಂಭವಿಸಿದೆ. ಹಳಿಯಾಳ ಕಡೆಯಿಂದ ಬೆಳಗಾವಿ ಕಡೆಗೆ ಚಲಿಸುತ್ತಿದ್ದ ಕಾರು, ಎದುರಿನಿಂದ ಬರುತ್ತಿದ್ದ ಟಾಟಾ-909 ಗೂಡ್ಸ್ ವಾಹನಕ್ಕೆ ನೇರವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದ ಪ್ರಶಾಂತ್ ಅವರ ಹಣೆಗೆ ಮತ್ತು ಕಾಲಿಗೆ ಗಂಭೀರ ಗಾಯವಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಬೆಳಿಗ್ಗೆ 10:05ರ ಸುಮಾರಿಗೆ ಅವರು ಮೃ., ತಪ. ಟ್ಟಿದ್ದಾರೆ.

ಈ ಕುರಿತು ಹಳಿಯಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರು ಚಾಲಕ ಮಂಗಳೂರು ಮೂಲದ ಮಹಮ್ಮದ ರಫೀಕ್ ಎಂಬಾತನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎಂದು ದೂರಿನಲ್ಲಿ ತಿಳಿಸಲಾಗಿದೆ. ಪೊಲೀಸರು ಚಾಲಕನ ವಿರುದ್ಧ ಮೊಕದ್ದಮೆ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಹೆಚ್ಚಿನ ಸುದ್ದಿ