Sunday, June 21, 2026
Homeದೇಶಕೆಪಿವೈಸಿಸಿ ವತಿಯಿಂದ ನಗರದಲ್ಲಿ ರಾಹುಲ್ ಗಾಂಧಿ ಹುಟ್ಟುಹಬ್ಬ ಆಚರಣೆ

ಕೆಪಿವೈಸಿಸಿ ವತಿಯಿಂದ ನಗರದಲ್ಲಿ ರಾಹುಲ್ ಗಾಂಧಿ ಹುಟ್ಟುಹಬ್ಬ ಆಚರಣೆ

ಬೆಂಗಳೂರು ಜೂ.19: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ (KPYCC) ವತಿಯಿಂದ  ನಗರದ ಕೆಪಿಸಿಸಿ ಕಚೇರಿ ಆವರಣದಲ್ಲಿ ಶುಕ್ರವಾರ ಲೋಕಸಭೆ ಪ್ರತಿಪಕ್ಷ ನಾಯಕರಾದ ರಾಹುಲ್ ಗಾಂಧಿಯವರ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿಯವರ ಬ್ಯಾನರ್ (ಭಾವಚಿತ್ರಕ್ಕೆ)ಗೆ ಕೆಪಿವೈಸಿಸಿ ಪದಾಧಿಕಾರಿಗಳು, ಸದಸ್ಯರು ಹಾಲಿನ ಅಭಿಷೇಕ ಮಾಡುವ ಮೂಲಕ ಶುಭ ಹಾರೈಸಿದರು.
ಕೆಪಿವೈಸಿಸಿ ಕಾನೂನು ಘಟಕದ ರಾಜ್ಯಾಧ್ಯಕ್ಷರಾದ ಶ್ರೀಧರ್ ಮಾತನಾಡಿ, “ರಾಹುಲ್ ಗಾಂಧಿಯವರು ದೇಶದ ಬಡವರು ಹಾಗೂ ವಿದ್ಯಾರ್ಥಿಗಳ ಧ್ವನಿಯಾಗಿದ್ದಾರೆ. ಅವರ ಹುಟ್ಟುಹಬ್ಬವಾದ ಇಂದು ಇಡೀ ದೇಶಾದ್ಯಂತ ಸಂಭ್ರಮ ಮನೆಮಾಡಿದೆ,” ಎಂದು ತಿಳಿಸಿದರು.

“ರಾಜ್ಯದ ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಕೆಪಿವೈಸಿಸಿ ಇಂದು ರಾಹುಲ್ ಗಾಂಧಿಯವರ ಭಾವಚಿತ್ರಕ್ಕೆ ಕ್ಷೀರಾಭಿಷೇಕ ಮಾಡಿ, ಸಿಹಿ ಹಂಚುವ ಮೂಲಕ ಅರ್ಥಪೂರ್ಣವಾಗಿ ಹುಟ್ಟುಹಬ್ಬವನ್ನು ಆಚರಿಸಲಾಗುತ್ತಿದೆ,” ಎಂದು ತಿಳಿಸಿ ರಾಹುಲ್ ಗಾಂಧಿಯವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದರು.

ಕಾರ್ಯಕ್ರಮದಲ್ಲಿ ಕೆಪಿವೈಸಿಸಿ ಕಾನೂನು ಘಟಕದ ರಾಜ್ಯಾಧ್ಯಕ್ಷರಾದ ಶ್ರೀಧರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಬಾಹುಬಲಿ,  ರಾಜ್ಯ ಕಾರ್ಯದರ್ಶಿ ಪೃಥ್ವಿ ಮಾಶೆಟ್ಟಿ, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷರಾದ ರಂಜಿತ್ ಕುಮಾರ್ ಆರ್., ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷರಾದ ರಾಹುಲ್ ಎನ್.ಎ., ಕೊಪ್ಪಳ ಜಿಲ್ಲಾಧ್ಯಕ್ಷ ಲಿಂಗೇಶ್ ಸೇರಿದಂತೆ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ವರದಿ : ಸೋಮಶೇಖರ ಲಮಾಣಿ

ಹೆಚ್ಚಿನ ಸುದ್ದಿ