ಗದಗ: ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಮನೆ ನಿರ್ಮಾಣಕ್ಕಾಗಿ ಅಡಿಪಾಯ ತೆಗೆಯುತ್ತಿದ್ದ ವೇಳೆ ತಂಬಿಗೆಯೊಂದರಲ್ಲಿ ಸುಮಾರು ಒಂದು ಕೆ.ಜಿ ತೂಕದ ಚಿನ್ನಾಭರಣಗಳು ಮತ್ತು ಬಂಗಾರದ ಒಡವೆಗಳಿರುವ ನಿಧಿ ಪತ್ತೆಯಾಗಿರುವ ಘಟನೆ ಗ್ರಾಮದಲ್ಲಿ ನಡೆದಿದೆ
.
ಲಕ್ಕುಂಡಿ ಗ್ರಾಮದ ಗಂಗವ್ವ ಬಸವರಾಜ್ ರಿತ್ತಿ ಎಂಬುವರಿಗೆ ಸೇರಿದ ಜಾಗದಲ್ಲಿ ಈ ನಿಧಿ ಪತ್ತೆಯಾಗಿದೆ. ತಮ್ಮ ಮನೆ ಕಟ್ಟಲೆಂದು ಕಾರ್ಮಿಕರ ಮೂಲಕ ಅಡಿಪಾಯ ತೆಗೆಯುವ ಕಾರ್ಯ ನಡೆಯುತ್ತಿದ್ದಾಗ ಮಣ್ಣಿನೊಳಗೆ ಹೂತುಹಾಕಲಾಗಿದ್ದ ತಂಬಿಗೆಯೊಂದು ಪತ್ತೆಯಾಗಿದೆ. ತಂಬಿಗೆಯನ್ನು ತೆರೆದಾಗ ಅದರೊಳಗೆ ಚಿನ್ನದ ಗಟ್ಟಿ, ಬಂಗಾರದ ಸರ, ಬಳೆಗಳು ಸೇರಿದಂತೆ ಹಲವು ಅಮೂಲ್ಯ ಚಿನ್ನಾಭರಣಗಳು ಇರುವುದು ಕಂಡುಬಂದಿದೆ. ಈ ಚಿನ್ನದ ಒಟ್ಟು ತೂಕ ಸುಮಾರು 1KG ಇರಬಹುದು ಎಂದು ಅಂದಾಜಿಸಲಾಗಿದೆ… ಸಧ್ಯ ಈ ಬಂಗಾರದ ನಿಧಿಯನ್ನು ಊರಿನ ಗುಡಿ ಒಳಗೆ ಇಡಲಾಗಿದೆ ಸ್ಥಳೀಯರು ನಿಧಿ ನೋಡಲು ಬರುತ್ತಿರುವುದರಿಂದ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ…
ಸಂಪಾದಕರು: ರಾಮಚಂದ್ರಪ್ಪ ಪೂಜೇರ
