ಬೆಂಗಳೂರು : ರಾಜ್ಯದ ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಜನನ, ಮರಣದ ನೋಂದಣಿಯನ್ನು ಇನ್ನು ಮುಂದೆ ಗ್ರಾಮ ಪಂಚಾಯಿತಿಯಲ್ಲೇ ಆರಂಭಿಸಲಾಗಿದೆ.
ಗ್ರಾಮೀಣ ಪ್ರದೇಶದಲ್ಲಿ ಜನನ, ಮರಣ ನೋಂದಣಿ ವ್ಯವಸ್ಥೆಗೆ ಬಲ ತುಂಬುವ ಜೊತೆಗೆ 30 ದಿನದೊಳಗೆ ನೋಂದಾಯಿಸಲು ಅನುಕೂಲವಾಗುವಂತೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳನ್ನು ಜನನ, ಮರಣ ಉಪನೋಂದಣಾಧಿಕಾರಿಗಳನ್ನಾಗಿ ಸರ್ಕಾರ ನೇಮಿಸಿದೆ.
ನೋಂದಣಿ ಹೇಗೆ?
- 21 ದಿನದೊಳಗೆ ನೋಂದಾಯಿಸಿದರೆ ಪ್ರಮಾಣ ಪತ್ರ ಉಚಿತ ವಿತರಣೆ
- 21 ದಿನಗಳ ಬಳಿಕ 30 ದಿನದೊಳಗೆ ನೋಂದಾಯಿಸಿದರೆ ₹2 ಶುಲ್ಕ
- 30 ದಿನಗಳ ಬಳಿಕ ಒಂದು ವರ್ಷದೊಳಗಾದರೆ ತಹಶೀಲ್ದಾರರ ಪತ್ರ ಲಗತ್ತಿನ ಜೊತೆ ₹5 ಶುಲ್ಕ
- 1 ವರ್ಷ ನಂತರವಾದರೆ ಮೊದಲನೇ ವರ್ಗದ ದಂಡಾಧಿಕಾರಿ ಅಥವಾ ಮಹಾಪ್ರಾಂತ ದಂಡಾಧಿಕಾರಿ ಆದೇಶ ಪತ್ರ ಲಗತ್ತು 10 ಶುಲ್ಕ