Friday, May 15, 2026
Homeಜಿಲ್ಲಾ ಸುದ್ದಿಗಳುಚನ್ನಮ್ಮನ ಕಿತ್ತೂರಿನಲ್ಲಿ ನೂತನ ಬಸ್ ಘಟಕ ಉದ್ಘಾಟನೆ ಗ್ರಾಮೀಣ ಭಾಗಕ್ಕೆ ಉತ್ತಮ ಸಾರಿಗೆ ವ್ಯವಸ್ಥೆ ಕಲ್ಪಿಸಲು...

ಚನ್ನಮ್ಮನ ಕಿತ್ತೂರಿನಲ್ಲಿ ನೂತನ ಬಸ್ ಘಟಕ ಉದ್ಘಾಟನೆ ಗ್ರಾಮೀಣ ಭಾಗಕ್ಕೆ ಉತ್ತಮ ಸಾರಿಗೆ ವ್ಯವಸ್ಥೆ ಕಲ್ಪಿಸಲು ಕ್ರಮ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ…

ಚನ್ನಮ್ಮನ ಕಿತ್ತೂರು: ಅನೇಕ ಜನಪರ ಯೋಜನೆಗಳನ್ನು ಜಾರಿಗೊಳಿಸುವುದರ ಮೂಲಕ ರಾಜ್ಯದ ಜನರ ಜೀವನಮಟ್ಟ ಸುಧಾರಿಸುವ ಕಾರ್ಯವನ್ನು ನಮ್ಮ ಸರ್ಕಾರ ಮಾಡುತ್ತಿದೆ ಎಂದು
ನೂತನವಾಗಿ ಚನ್ನಮ್ಮ ಕಿತ್ತೂರಿನಲ್ಲಿ ಉದ್ಘಾಟನೆಗೊಂಡಂತಹ ಹೊಸ ಬಸ್ ನಿಲ್ದಾಣ ನಮ್ಮ ಕಿತ್ತೂರು ಭಾಗದ ಜನರಿಗೆ ಉತ್ತಮ ಸಾರಿಗೆ ವ್ಯವಸ್ಥೆ ಉತ್ತಮಗೊಳಿಸುವ ನಿಟ್ಟಿನಲ್ಲಿ ಸಾರಿಗೆ ಘಟಕ ಸ್ಥಾಪನೆ ಮಾಡಿದೆ ಎಂದು ಸಚಿವರೂ ಮಾಹಿತಿ ನೀಡಿದರು.


ಚನ್ನಮ್ಮನ ಕಿತ್ತೂರು ನೂತನ ಬಸ್ ಘಟಕದ ಆವರಣದಲ್ಲಿ ಸೋಮವಾರ ಮೇ 4 ರಂದು ಚನ್ನಮ್ಮನ ಕಿತ್ತೂರು ನೂತನ ಬಸ್ ಘಟಕ ಉದ್ಘಾಟನೆ ನೆರವೇರಿಸಿ ಹೊಸ 15 ಬಸ್ ಗಳನ್ನು ಚಾಲನೆ ನೀಡಿದರು…

ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು అంದಾಜು ಐದು(5) ಕೋಟಿ ರೂ. ಗಳ ವೆಚ್ಚದಲ್ಲಿ ನಿರ್ಮಿಸಿರುವ ಸುಸಜ್ಜಿತ ನೂತನ ಬಸ್ ಘಟಕದಲ್ಲಿ ಪೆಟ್ರೋಲ್ ಬಂಕ್ ಸ್ಥಾಪಿಸಲು ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು ಮತ್ತು ಬಸ್ ಘಟಕದಲ್ಲಿ ಕಾಂಕ್ರೀಟ್ ಕಾಮಗಾರಿಯನ್ನು ಶೀಘ್ರವೇ ಕೈಗೊಳ್ಳಲಾಗುವುದು ಎಂದು ತಿಳಿಸಿದರು ಹಾಗೂ ಚನ್ನಮ್ಮನ ಕಿತ್ತೂರು ಸಾರಿಗೆ ಘಟಕಕ್ಕೆ ಹೊಸದಾಗಿ 15 ಬಸ್ ನೀಡಲಾಗಿದೆ ಎಂದು ತಿಳಿಸಿದರು..
ಈ ಬಸ್‌ಗಳನ್ನು ಗಾಮೀಣ ಭಾಗದ ಜನರಿಗೆ ಹಾಗೂ ಮುಖ್ಯವಾಗಿ ಶಾಲಾ ಮಕ್ಕಳಿಗೆ ಕೆಲಸಕ್ಕೆ ಹೋಗುವ ಜನರಿಗೆ ಅನುಕೂಲವಾಗುವಂತೆ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಲು ಸಚಿವರಾದ ಸಚಿವರು ರಾಮಲಿಂಗಾರಡ್ಡಿ ಅವರು ತಿಳಿಸಿದರು…

ಕಿತ್ತೂರು ಶಾಸಕರಾದ ಶ್ರೀ ಬಾಬಾಸಾಹೇಬ ಪಾಟೀಲ ಅವರು ಮಾತನಾಡಿ, ಚನ್ನಮ್ಮನ ಕಿತ್ತೂರಿನಲ್ಲಿ ನೂತನ ಬಸ್ ಘಟಕ ನಿರ್ಮಾಣದ ಬಹು ದಿನಗಳ ಬೇಡಿಕೆ ಈಗ ಈಡೇರಿದಂತಾಗಿದೆ. ಚನ್ನಮ್ಮನ ಕಿತ್ತೂರು ಐತಿಹಾಸಿಕ ಸ್ಥಳವಾಗಿದ್ದು ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡುವುದೇ ನಮ್ಮ ಉದ್ದೇಶದೊಂದಿಗೆ ಆರಂಭಿಸಲಾಗಿದೆ ಎಂದು ತಿಳಿಸಿದರು.
ಇದೇ ಸಮಯದಲ್ಲಿ ಕಿತ್ತೂರು ಸಾರಿಗೆ ಘಟಕಕ್ಕೆ ಇನ್ನೂ ಹಲವಾರು ಹೊಸ ಬಸ್ ಗಳ ಬೇಡಿಕೆ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಗಮನಕ್ಕೆ ತಂದರು..

ಈ ಕಾರ್ಯಕ್ರಮದಲ್ಲಿ ವಾ.ಕ.ರ.ಸಾ.ಸಂಸ್ಥೆ ಉಪಾಧ್ಯಕ್ಷರಾದ ಸುನೀಲ ಹನುಮಣ್ಣವರ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷರಾದ ವಿನಯ ನಾವಲಗಟ್ಟಿ, ವಾಕರಸಾ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕಿ ಪ್ರೀಯಾಂಕ್ ಎಮ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆರ್.ಬಿ.ಬಸರಗಿ, ವಿಭಾಗೀಯ ನಿಯಂತ್ರಣಾಧಿಕಾರಿಗಳು,ಘಟಕದ ವ್ಯವಸ್ಥಾಪಕರು, ಸಿಬ್ಬಂದಿ ವರ್ಗದವರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು…

ಸಂಪಾದಕರು: ರಾಮಚಂದ್ರಪ್ಪ ಪೂಜೇರ (ಚನ್ನಮ್ಮನ ಕಿತ್ತೂರು)

ಹೆಚ್ಚಿನ ಸುದ್ದಿ