ಸುರಪುರ: ಪ್ರತಿವರ್ಷದಂತೆ ಈ ವರ್ಷವೂ ಕೂಡಾ ಅಮರಶಿಲ್ಪಿ ಜಕಣಾಚಾರಿ ಜಯಂತಿಯನ್ನು ಅದ್ದೂರಿಯಾಗಿ ಆಚರಿಸೋಣ ಎಂದು ತಹಶೀಲ್ದಾರ ಹುಸೇನಸಾಬ್ ಎ.ಸರಕಾವಸ್ ಅಧಿಕಾರಿಗಳಿಗೆ ಸೂಚಿಸಿದರು.
ಮಂಗಳವಾರ ನಗರದ ತಹಸೀಲ್ದಾರರ ಕಾರ್ಯಾಲಯದಲ್ಲಿ ಅಮರಶಿಲ್ಪಿ ಜಕಣಾಚಾರಿ ಜಯಂತ್ಯೋತ್ಸವ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ತಹಸೀಲ್ದಾರರ ಅವರು
ಜನವರಿ ೧ ರಂದು ನಗರದ ತಹಸೀಲ್ದಾರ ಕಾರ್ಯಾಲಯದಿಂದ ಬೆಳಿಗ್ಗೆ ೧೧ ಗಂಟೆಗೆ ನಡೆಯುವ ಕಾರ್ಯಕ್ರಮಕ್ಕೆ ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಗೂ ವಿಶ್ವಕರ್ಮ ಮುಖಂಡರು ವಿವಿಧ ಸಂಘಟನೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು & ಸಾರ್ವಜನಿಕರು ತಪ್ಪದೆ ಕಾರ್ಯಕ್ರಮಕ್ಕೆ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸೂಚಿಸಿದರು.
ಅಮರಶಿಲ್ಪಿ ಜಕಣಾಚಾರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲು ವೇದಿಕೆ ಅಲಂಕರಿಸಲು ಹಾಗೂ ಕುಡಿಯುವ ನೀರು ಹಾಗೂ ಸ್ವಚ್ಚತೆ ಮಾಡಲು ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು.
ಎಲ್ಲಾ ಸರಕಾರಿ ಅರೆ ಸರಕಾರಿ ಕಚೇರಿಗಳಲ್ಲಿ ಬೆಳಿಗ್ಗೆ ೯ ಗಂಟೆಗೆ ಜಯಂತಿಯನ್ನು ಆಚರಿಸಬೇಕು ಎಂದು ತಾಲೂಕು ಅನುಷ್ಠಾನ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ತಾಲೂಕು ವೈದ್ಯಾಧಿಕಾರಿ ಡಾ//ರಾಜಾ ವೆಂಕಪ್ಪ ನಾಯಕ, ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ತಾಲೂಕು ಅಧ್ಯಕ್ಷ ದೇವಿಂದ್ರಪ್ಪ ತಳವಾರಗೇರಾ,ವಿಶ್ವಕರ್ಮ ಸಮಾಜದ ಮುಖಂಡರಾದ ಮಹೇಶ್ ಶಾರದಹಳ್ಳಿ,ಮಹೇಶ್ ಸಗರ,ಪ್ರಭು ಪತ್ತಾರ,ರಾಜು ನಿಡಗುಂದಿ, ಭಾಸ್ಕರ್,ನಾಗರಾಜ್,ಶ್ರೀಕಾಂತ್ ಚಿಕ್ಕನಹಳ್ಳಿ,ಗಂಗಾಧರ ರಂಗಂಪೇಟ್,ಮಲ್ಲಿಕಾರ್ಜುನ ಬಡಿಗೇರ ಹಾಗೂ ವಿವಿಧ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವರದಿ: ಮೌನೇಶ ಆರ್ ಭೋಯಿ