Monday, June 8, 2026
Homeಜಿಲ್ಲಾ ಸುದ್ದಿಗಳುಜನವಾಡ–ಹುಲಿಗಡ್ಡೆ ರಸ್ತೆ ಡಾಂಬರೀಕರಣ ಕಾಮಗಾರಿಗೆ ಭೂಮಿಪೂಜೆ: ಗ್ರಾಮೀಣ ಅಭಿವೃದ್ಧಿಗೆ ಆದ್ಯತೆ – ಚಿದಾನಂದ ಸವದಿ

ಜನವಾಡ–ಹುಲಿಗಡ್ಡೆ ರಸ್ತೆ ಡಾಂಬರೀಕರಣ ಕಾಮಗಾರಿಗೆ ಭೂಮಿಪೂಜೆ: ಗ್ರಾಮೀಣ ಅಭಿವೃದ್ಧಿಗೆ ಆದ್ಯತೆ – ಚಿದಾನಂದ ಸವದಿ

ಅಥಣಿ ತಾಲೂಕಿನ ಜನವಾಡ ಗ್ರಾಮದಿಂದ ಹುಲಿಗಡ್ಡೆವರೆಗೆ ಸಂಪರ್ಕ ಕಲ್ಪಿಸುವ 2 ಕಿ.ಮೀ. ರಸ್ತೆ ಡಾಂಬರೀಕರಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಲಾಯಿತು.

ಸನ್ 2025-26ನೇ ಸಾಲಿನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಯೋಜನೆಯ ಲೆಕ್ಕ ಶೀರ್ಷಿಕೆಯಡಿ 50 ಲಕ್ಷ ಅನುದಾನದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಈ ಕಾಮಗಾರಿಯ ಭೂಮಿಪೂಜೆಯನ್ನು ಕಾಂಗ್ರೆಸ್ ಪಕ್ಷದ ಯುವ ನಾಯಕ ಚಿದಾನಂದ ಸವದಿ ಅವರ ನೇತೃತ್ವದಲ್ಲಿ ಗ್ರಾಮದ ಹಿರಿಯ ಮುಖಂಡರು ಹಾಗೂ ಸಾರ್ವಜನಿಕರು ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಚಿದಾನಂದ ಸವದಿ ಅವರು, ಗ್ರಾಮೀಣ ಭಾಗದ ರಸ್ತೆ ಅಭಿವೃದ್ಧಿಯು ಜನರ ಜೀವನಮಟ್ಟ ಸುಧಾರಣೆಗೆ ಪ್ರಮುಖವಾಗಿದೆ. ಜನವಾಡ–ಹುಲಿಗಡ್ಡೆ ರಸ್ತೆ ಹದಗೆಟ್ಟಿದ್ದು, ಸಾರ್ವಜನಿಕರು ಹಾಗೂ ರೈತರು ಸಂಚಾರಕ್ಕೆ ತೊಂದರೆ ಅನುಭವಿಸುತ್ತಿದ್ದರು. ಇದೀಗ 50 ಲಕ್ಷ ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿ ಆರಂಭವಾಗಿರುವುದು ಸಂತಸದ ವಿಷಯ. ಕಾಮಗಾರಿ ಗುಣಮಟ್ಟದೊಂದಿಗೆ ನಿಗದಿತ ಅವಧಿಯಲ್ಲಿ ಪೂರ್ಣಗೋಳಿಸು ವಂತೆ ಸೂಚಿಸಲಾಗಿದೆ” ಎಂದು ಹೇಳಿದರು.

ಕ್ಷೇತ್ರದ ಪ್ರತಿಯೊಂದು ಗ್ರಾಮಕ್ಕೂ ಮೂಲಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ನಿರಂತರವಾಗಿ ಅಭಿವೃದ್ಧಿ ಕಾಮಗಾರಿಗಳನ್ನು ತರುವ ಪ್ರಯತ್ನ ನಡೆಯುತ್ತಿದೆ. ಗ್ರಾಮೀಣ ರಸ್ತೆ, ಕುಡಿಯುವ ನೀರು, ವಿದ್ಯುತ್ ಹಾಗೂ ಶಿಕ್ಷಣ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಜನರ ಸಹಕಾರದಿಂದ ಕ್ಷೇತ್ರವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವ ಸಂಕಲ್ಪ ಹೊಂದಿದ್ದೇವೆ” ಎಂದು ತಿಳಿಸಿದರು.

ಈ ವೇಳೆ ಗ್ರಾಮದ ಹಿರಿಯ ಮುಖಂಡರು, ಜನಪ್ರತಿನಿಧಿಗಳು, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಹೆಚ್ಚಿನ ಸುದ್ದಿ