ಅಥಣಿ: ಜನರ ಸಮಸ್ಯೆಗಳಿಗೆ ಸ್ಪಂದಿಸುವುದೇ ಜನಪ್ರತಿನಿಧಿಯ ಮುಖ್ಯ ಕರ್ತವ್ಯವಾಗಿದೆ, ಸಾರ್ವಜನಿಕರ ಸಮಸ್ಯೆಗಳ ಪರಿಹಾರಕ್ಕೆ ಅಧಿಕಾರಿಗಳು ಆದ್ಯತೆ ನೀಡಬೇಕು ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಅವರು ಅಥಣಿ ತಾಲೂಕಿನ ತಮ್ಮ ಗೃಹ ಕಚೇರಿಯಲ್ಲಿ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ ಮಾತನಾಡಿದರು.
ಗ್ರಾಮಸ್ಥರು ಮೂಲಭೂತ ಸೌಲಭ್ಯಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಶಾಸಕರ ಗಮನಕ್ಕೆ ತಂದರು. ಸಮಸ್ಯೆಗಳನ್ನು ಆಲಿಸಿದ ಶಾಸಕ ಸವದಿ ಅವರು ಸಂಬಂಧಿಸಿದ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಸಾರ್ವಜನಿಕರ ಅಹವಾಲುಗಳನ್ನು ಶೀಘ್ರವಾಗಿ ಪರಿಹರಿಸುವಂತೆ ಸೂಚನೆ ನೀಡಿದರು.
“ಸಾರ್ವಜನಿಕರು ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ಬರಬಾರದು. ಜನರ ಸಮಸ್ಯೆಗಳಿಗೆ ಸಮಯೋಚಿತವಾಗಿ ಸ್ಪಂದಿಸಿ ಪರಿಹಾರ ಕಲ್ಪಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ. ಜನಸೇವೆಯೇ ನನ್ನ ಪ್ರಮುಖ ಧ್ಯೇಯವಾಗಿದ್ದು, ಕ್ಷೇತ್ರದ ಪ್ರತಿಯೊಬ್ಬ ನಾಗರಿಕರ ಸಮಸ್ಯೆಗೆ ಸ್ಪಂದಿಸಲು ಸದಾ ಬದ್ಧನಾಗಿದ್ದೇನೆ” ಎಂದು ಶಾಸಕ ಲಕ್ಷ್ಮಣ ಸವದಿ ತಿಳಿಸಿದರು.
ಈ ಸಂದರ್ಭದಲ್ಲಿ ವಿವಿಧ ಗ್ರಾಮಗಳ ಮುಖಂಡರು, ಸಾರ್ವಜನಿಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ: ಯಾಸಿನ ಝಾರೆ, ಅಥಣಿ
