ಸಿಂದಗಿ: ತಾಲ್ಲೂಕಿನ ಜಾಲವಾದ ಗ್ರಾಮದಲ್ಲಿ ಆರ್.ಇ.ಝಡ್ (REZ) ಕಂಪನಿಯ ವಿರುದ್ಧ ದ್ರಾವಿಡ ದಲಿತ ಸೇನಾ ಹಾಗೂ ರಾಜ್ಯ ರೈತ ಸಂಘದ ಜಂಟಿ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ರೈತರ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವು ಇಂದು ತೀವ್ರಗೊಂಡಿದೆ. ಈ ಹೋರಾಟದ ಸ್ಥಳಕ್ಕೆ ದೇವರ ಹಿಪ್ಪರಗಿ ಮತಕ್ಷೇತ್ರದ ಶಾಸಕರಾದ ರಾಜುಗೌಡ ಪಾಟೀಲ್ ಕುದರಿ ಸಾಲವಾಡಗಿ ಅವರು ಭೇಟಿ ನೀಡಿ, ರೈತರ ಬೇಡಿಕೆಗಳಿಗೆ ಬೆಂಬಲ ವ್ಯಕ್ತಪಡಿಸಿದರು.
ಕಂಪನಿಯು ರೈತರಿಗೆ ಮಾಡುತ್ತಿರುವ ಅನ್ಯಾಯವನ್ನು ಖಂಡಿಸಿದ ಶಾಸಕರು, ರೈತರ ಭೂಮಿ ಮತ್ತು ಹಕ್ಕುಗಳ ರಕ್ಷಣೆಗಾಗಿ ನಾವು ಸದಾ ಸಿದ್ಧರಿದ್ದೇವೆ. ನ್ಯಾಯ ಸಿಗುವವರೆಗೂ ಈ ಹೋರಾಟ ಮುಂದುವರಿಯಲಿ, ಇದಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಘೋಷಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ನಿಂಗಪ್ಪ ಬಿರಾದಾರ್ ಸ್ಥಳಕ್ಕೆ ಭೇಟಿ ನೀಡಿ ರೈತರಿಂದ ಅಹವಾಲುಗಳನ್ನು ಸ್ವೀಕರಿಸಿದರು. ಪಿ.ಎಸ್.ಐ ಸಚೀನ್ ಆಲಮೇಲಕರ್ ಅವರ ನೇತೃತ್ವದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜಶೇಖರಗೌಡ ಪಾಟೀಲ (ಕೋರವಾರ), ಜೆಡಿಎಸ್ ಜಿಲ್ಲಾ ಕಾರ್ಯದರ್ಶಿ ಗುರನಗೌಡ ಪಾಟೀಲ, ರೈತ ಮುಖಂಡ ಶಂಕರಗೌಡ ಪಾಟೀಲ, ರಾಮು ದೇಸಾಯಿ ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದು, ಕಂಪನಿಯ ದಬ್ಬಾಳಿಕೆಯ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನೂರಾರು ಗ್ರಾಮಸ್ಥರು ಹಾಗೂ ರೈತರು ಧರಣಿಯಲ್ಲಿ ಭಾಗವಹಿಸಿ ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದರು
