Wednesday, June 10, 2026
Homeಅಪಘಾತಟಿಪ್ಪರ್ ಹರಿದು ವೃದ್ಧ ಸಾ*ವು: ವೇಗದ ವಾಹನಗಳ ನಿಯಂತ್ರಣಕ್ಕೆ ಸಾರ್ವಜನಿಕರ ಆಗ್ರಹ...

ಟಿಪ್ಪರ್ ಹರಿದು ವೃದ್ಧ ಸಾ*ವು: ವೇಗದ ವಾಹನಗಳ ನಿಯಂತ್ರಣಕ್ಕೆ ಸಾರ್ವಜನಿಕರ ಆಗ್ರಹ…

ಅಥಣಿ: ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿ ರಸ್ತೆ ದಾಟುತ್ತಿದ್ದ ವೃದ್ಧರೊಬ್ಬರಿಗೆ ಟಿಪ್ಪರ್ ಹಾದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ನಡೆದಿದೆ.

ಇತ್ತೀಚಿನ ದಿನಗಳಲ್ಲಿ ಅಥಣಿ ತಾಲೂಕಿನಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ವಿಶೇಷವಾಗಿ ಟಿಪ್ಪರ್ ವಾಹನಗಳು ಪಟ್ಟಣ ಹಾಗೂ ಒಳಗಿನ ರಸ್ತೆಗಳಲ್ಲಿ ಸಹ ಅತಿವೇಗವಾಗಿ ಸಂಚರಿಸುತ್ತಿರುವುದರಿಂದ ಪಾದಚಾರಿಗಳು, ವಯೋವೃದ್ಧರು ಹಾಗೂ ದ್ವಿಚಕ್ರ ವಾಹನ ಸವಾರರು ಅಪಾಯದ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ.

ಅಂಬೇಡ್ಕರ್ ವೃತ್ತ ಸೇರಿದಂತೆ ಜನಸಂದಣಿ ಪ್ರದೇಶಗಳಲ್ಲಿ ಭಾರೀ ವಾಹನಗಳ ಸಂಚಾರ ಮತ್ತು ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಅಲ್ಲದೆ ಸಂಚಾರ ನಿಯಮ ಉಲ್ಲಂಘಿಸುವ ವಾಹನ ಚಾಲಕರ ವಿರುದ್ಧ ಕಠಿಣ ಕ್ರಮ ಜರುಗಿಸಿ, ಅಪಘಾತಗಳನ್ನು ತಡೆಗಟ್ಟಲು ಅಥಣಿ ಪೊಲೀಸ್ ಇಲಾಖೆ ಹಾಗೂ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಹೆಚ್ಚಿನ ಸುದ್ದಿ