Saturday, June 13, 2026
HomeUncategorizedಡಾ. ಹೆಚ್. ಸಿ. ಮಹಾದೇವಪ್ಪ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡುವಂತೆ : ಮಂಜುನಾಥ್ ಆರ್....

ಡಾ. ಹೆಚ್. ಸಿ. ಮಹಾದೇವಪ್ಪ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡುವಂತೆ : ಮಂಜುನಾಥ್ ಆರ್. ಕಟ್ಟಿಮನಿ ಆಗ್ರಹ.

ದಲಿತ ಸಮುದಾಯದ ಅಸ್ಮಿತೆ, ಸಾಮಾಜಿಕ ನ್ಯಾಯದ ಪರ ಹೋರಾಟಗಾರರು ಹಾಗೂ ಸಂವಿಧಾನದ ಮೌಲ್ಯಗಳಿಗೆ ಬದ್ಧರಾಗಿರುವ ಹಿರಿಯ ನಾಯಕ ಡಾ!! ಹೆಚ್ ಸಿ ಮಹಾದೇವಪ್ಪ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಮಹತ್ವದ ಸ್ಥಾನ ನೀಡಬೇಕೆಂದು ನಾವು ರಾಜ್ಯ ಸರ್ಕಾರವನ್ನು ಆಗ್ರಹಿಸುತ್ತೇವೆ.
ಸಾಮಾಜಿಕ ನ್ಯಾಯ, ಸಮಾನತೆ ಮತ್ತು ಶೋಷಿತ ಸಮುದಾಯಗಳ ಅಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸುತ್ತಿರುವ ಡಾ. ಹೆಚ್. ಸಿ. ಮಹಾದೇವಪ್ಪ ಅವರು ಡಾ!! ಬಿ ಆರ್ ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಅನುಸರಿಸಿ ಜನಪರ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಅನುಭವ, ಬದ್ಧತೆ ಮತ್ತು ಜನಪರ ಕಾಳಜಿಯನ್ನು ಪರಿಗಣಿಸಿ ಡಿ ಕೆ ಶಿವಕುಮಾರ್ ನೇತೃತ್ವದ ಸರ್ಕಾರವು ಸಚಿವ ಸಂಪುಟದಲ್ಲಿ ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕು.
ದಲಿತರು, ಹಿಂದುಳಿದವರು ಹಾಗೂ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾರ್ಯನಿರ್ವಹಿಸಿರುವ ಮಹಾದೇವಪ್ಪ ಅವರಂತಹ ನಾಯಕರಿಗೆ ಹೆಚ್ಚಿನ ಜವಾಬ್ದಾರಿ ನೀಡುವುದರಿಂದ ಸರ್ಕಾರದ ಮೇಲಿನ ಜನರ ವಿಶ್ವಾಸ ಮತ್ತಷ್ಟು ಬಲಗೊಳ್ಳಲಿದೆ.
ಆದ್ದರಿಂದ ರಾಜ್ಯ ಸರ್ಕಾರವು ತಕ್ಷಣವೇ ಡಾ. ಹೆಚ್. ಸಿ. ಮಹಾದೇವಪ್ಪ ಅವರಿಗೆ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನ ನೀಡಿ ಸಾಮಾಜಿಕ ನ್ಯಾಯಕ್ಕೆ ತನ್ನ ಬದ್ಧತೆಯನ್ನು ಪ್ರದರ್ಶಿಸಬೇಕೆಂದು ಒತ್ತಾಯಿಸುತ್ತೇವೆ.

ಶ್ರೀ ಮಂಜುನಾಥ್ ಆರ್. ಕಟ್ಟಿಮನಿ
ದಲಿತ ಸಂಘರ್ಷ ಸಮಿತಿ (ಸಂಯೋಜಕ), ವಿಜಯಪುರ ಜಿಲ್ಲೆ.

ಹೆಚ್ಚಿನ ಸುದ್ದಿ