ಬೆಂಗಳೂರು;
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಮುನ್ನ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ತುಳು ಭಾಷೆಗೆ ಎರಡನೇ ಭಾಷೆಯ ಸ್ಥಾನಮಾನ ನೀಡುವುದು ಹಾಗೂ ತುಳು ಅಭಿವೃದ್ಧಿ ಪ್ರಾಧಿಕಾರ ರಚಿಸುವುದಾಗಿ ಭರವಸೆ ನೀಡಿತ್ತು. ಅದರಂತೆ ಶೀಘ್ರವೇ ತುಳು ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಒತ್ತಾಯ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಒತ್ತಾಯಿಸಿದ್ದಾರೆ.
ಚುನಾವಣಾ ಪ್ರಣಾಳಿಕೆಯಲ್ಲಿನ ಗ್ಯಾರಂಟಿಗಳನ್ನು ಸಮರ್ಪಕವಾಗಿ ಜಾರಿಗೊಳಿಸಿರುವಂತೆ, ತುಳು ಭಾಷೆಗೆ ನೀಡಿರುವ ಈ ಮಹತ್ವದ ಆಶ್ವಾಸನೆಗಳನ್ನೂ ಆದ್ಯತೆಯೊಂದಿಗೆ ಈಡೇರಿಸಬೇಕು.
ತುಳುವ ಕರ್ನಾಟಕದ ಜನರ ಬಹುದಿನಗಳ ಬೇಡಿಕೆಯಾಗಿರುವ ತುಳು ಭಾಷೆಯ ಅಭಿವೃದ್ಧಿಗೆ ಸರ್ಕಾರ ಸ್ಪಷ್ಟವಾದ ಹೆಜ್ಜೆ ಇಡಬೇಕಾಗಿದೆ. ಮಂಗಳೂರಿನಲ್ಲಿ ಪ್ರಪ್ರಥಮ ಬಾರಿಗೆ ನಡೆಯಲಿರುವ ಸಚಿವ ಸಂಪುಟ ಅಧಿವೇಶನದಲ್ಲಿಯೇ ತುಳು ಭಾಷೆಗೆ ಎರಡನೇ ಭಾಷೆಯ ಸ್ಥಾನಮಾನ ಹಾಗೂ ತುಳು ಅಭಿವೃದ್ಧಿ ಪ್ರಾಧಿಕಾರ ರಚನೆಯ ಕುರಿತು ಸರ್ಕಾರ ಘೋಷಣೆ ಮಾಡಬೇಕು ಎಂದು ತುಳುವ ಮಹಾಸಭೆ ಇಂಟರ್ನ್ಯಾಷನಲ್ನ ಕರ್ನಾಟಕ ರಾಜ್ಯ ಅಧ್ಯಕ್ಷ ಶ್ರೀ ದೇವೇಂದ್ರ ಹೆಗ್ಡೆ ಕೊಕ್ರಾಡಿ ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಶ್ರೀ ಮಾಳ ಹರ್ಷೇಂದ್ರ ಜೈನ್ ಹಾಗೂ ರಾಜ್ಯ ಸಂಚಾಲಕ ಶ್ರೀ ಅಭಿಷೇಕ್ ಕೆ. ಕಾರ್ಕಳ ಹಾಗೂ ತುಳುವ ಮಹಾಸಭೆಯ ಬೆಂಗಳೂರು ವಲಯದ ಅಧ್ಯಕ್ಷರಾದ ಪುರುಷೋತ್ತಮ ಚೇಂಡ್ಲ, ಪ್ರಧಾನ ಸಂಚಾಲಕರಾದ ಶಾಂತಾರಾಮ್ ವಿ. ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಶಿವಾನಂದ ಸಾಲ್ಯಾನ್ ಅವರು ಸಹ ಸರ್ಕಾರವು ತುಳುವರಿಗೆ ನೀಡಿರುವ ಈ ಭರವಸೆಗಳನ್ನು ಶೀಘ್ರವಾಗಿ ಈಡೇರಿಸಬೇಕು ಎಂದು ಒತ್ತಾಯಿಸಿದರು.
