ಯಾದಗಿರಿ : ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಇಂದು ನಡೆದಂತ ಜಿಲ್ಲಾ ಅಭಿವೃದ್ಧಿ ಸಮನ್ವಯ ಮೇಲ್ವಿಚಾರಣೆ ಸಮತಿ (DISHA) ಯಾದಗಿರಿ ಅವರ ಅಧ್ಯಕ್ಷತೆಯಲ್ಲಿ ಜರಗುವ ದಿಶಾ ಸಮಿತಿ ಪ್ರಗತಿ ಪರಿಶೀಲನೆ ಸಭೆಯು ರಾಯಚೂರು ಲೋಕಸಭಾ ಕ್ಷೇತ್ರದ ಸಂಸದ ಜಿ.ಕುಮಾರ್ ನಾಯಕ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯನ್ನು ಉದ್ದೇಶಿಸಿ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಣ್ಣ ಕೈಗಾರಿಕಾ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಸುರಪುರ ವಿಧಾನಸಭಾ ಕ್ಷೇತ್ರದ ಶಾಸಕ ರಾಜಾ ವೇಣುಗೋಪಾಲ ನಾಯಕ, ಯಾದಗಿರಿ ವಿಧಾನಸಭಾ ಕ್ಷೇತ್ರದ ಶಾಸಕ ಚೆನ್ನಾರೆಡ್ಡಿ ತುನ್ನೂರ್ ,ಗುರುಮಿಟಕಲ್ ವಿಧಾನಸಭಾ ಕ್ಷೇತ್ರದ ಶಾಸಕ ಶರಣಗೌಡ ಕಂದಕೂರ್, ಜಿಲ್ಲಾಧಿಕಾರಿ ಡಾ//ಸುಶೀಲಾ ಬಿ. ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವೀಶ್ ಒರಡಿಯಾ,ಜಿಲ್ಲಾ ಪೋಲಿಸ್ ಅಧೀಕ್ಷಕರು ಹಾಗೂ ಜಿಲ್ಲಾ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
*ವರದಿ : ಮೌನೇಶ ಆರ್ ಭೋಯಿ*

