ಬೆಂಗಳೂರು: ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡರ ಧರ್ಮಪತ್ನಿ ಶ್ರೀಮತಿ ಚೆನ್ನಮ್ಮ ಅವರ ನಿಧನಕ್ಕೆ ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

ದೇವೇಗೌಡ ಅವರ ರಾಜಕೀಯ ಕ್ಷೇತ್ರದ ಸಾಧನೆಗೆ ಚೆನ್ನಮ್ಮ ಅವರ ಕೊಡುಗೆ ಮಹತ್ವದ್ದು ಎಂದು ತಿಳಿಸಿದ್ದಾರೆ. ದೇವರು ಅವರ ಆತ್ಮಕ್ಕೆ ಸದ್ಗತಿಯನ್ನು ಕರುಣಿಸಲಿ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.
