Monday, February 9, 2026
HomeUncategorizedದೇಶ ಸುತ್ತಿ ನೋಡು ಕೋಶ ಓದಿ ನೋಡು ಶರಣು ನಾಯ್ಕಲ್.

ದೇಶ ಸುತ್ತಿ ನೋಡು ಕೋಶ ಓದಿ ನೋಡು ಶರಣು ನಾಯ್ಕಲ್.

ಶಹಾಪುರ:- ಶೈಕ್ಷಣಿಕ ಪ್ರವಾಸ ವಿದ್ಯಾರ್ಥಿಗಳ‌ಹಿತ ದೃಷ್ಟಿಯಿಂದ ತುಂಬಾ ಅನುಕೂಲಕರವಾಗಿದೆ ಸರ್ಕಾರ ಪ್ರತಿ ವರ್ಷದಂತೆ ಈ ವರ್ಷವೂ ಸಮಾಜ ಕಲ್ಯಾಣ ಇಲಾಖೆ ಬೆಂಗಳೂರು ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಬೆಂಗಳೂರವರ ಆದೇಶದಂತೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಒಂಬತ್ತನೇ ತರಗತಿಯಲ್ಲಿ ಓದುತ್ತಿರುವ ಹಾಗೂ ಪ್ರಥಮ ಪಿಯುಸಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸರ್ಕಾರವು ಉಚಿತವಾಗಿ ಪ್ರವಾಸಕ್ಕೆ ಕರೆದುಕೊಂಡು ಹೋಗಲಿಕ್ಕೆಎರಡು ದಿನಗಳ ಕಾಲ ಅವಕಾಶ ಕಲ್ಪಸಿ ಕೊಟ್ಟಿದೆ ಇದರಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲಕರವಾಗಿದೆ ಎಂದು ದೊರಿಗುಡ್ಡ (ಉಕ್ಕಿನಾಳ) ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಶರಣಬಸವ ನಾಯ್ಕಲ್ ಹೇಳಿದರು.

ಈ‌ ಸಂದರ್ಭದಲ್ಲಿ ಕೆಂಭಾವಿ ವಲಯ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಡಿವಾಳಪ್ಪ ಪಾಟೀಲ್ ಹೆಗ್ಗಣದೊಡ್ಡಿ, ಭಾಗ್ಯಮ್ಮ ಪಾಟೀಲ್, ಮಲ್ಲಿಕಾರ್ಜುನ ಮಳಿಕೇರಿ, ರಾಜಕುಮಾರ ಬಡಿಗೇರ, ಹಾಗೂ ಒಂಬತ್ತನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳು ಅಡುಗೆ ಸಿಬ್ಬಂದಿಯವರು ಹಾಜರಿದ್ದರು

ವರದಿ : ಮೌನೇಶ ಆರ್ ಭೋಯಿ

ಹೆಚ್ಚಿನ ಸುದ್ದಿ