ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮನ್ ಅವರು ರಾಜ್ಯದಲ್ಲಿನ ಸುಮಾರು 19 ಟೋಲ್ ಗೇಟ್ಗಳನ್ನು ಮುಚ್ಚಿಸುವ ನಿರ್ಧಾರ ತೆಗೆದುಕೊಂಡಿದ್ದಾರೆ.
ವಾಹನ ಖರೀದಿಸುವಾಗಲೇ ಜನರು ಲಕ್ಷಾಂತರ ರೂಪಾಯಿ ರೋಡ್ ಟ್ಯಾಕ್ಸ್ ಕಟ್ಟುತ್ತಾರೆ ಎಂದು ಅವರು ಹೇಳಿದ್ದಾರೆ.
ಸಾಮಾನ್ಯ ಜನರ ಮೇಲಿನ ಆರ್ಥಿಕ ಭಾರ ಕಡಿಮೆ ಮಾಡಲು ಈ ಕ್ರಮ ಕೈಗೊಳ್ಳಲಾಗಿದೆ ಎಂಬ ವರದಿಗಳು ಹೊರಬಿದ್ದಿವೆ.
ಈ ನಿರ್ಧಾರ ಈಗ ದೇಶದ ಹಲವು ರಾಜ್ಯಗಳಲ್ಲಿ ಚರ್ಚೆಗೆ ಕಾರಣವಾಗಿದೆ.
ಈ ಸುದ್ದಿ ನಿಜವೇ ಆಗಿದ್ದಲ್ಲಿ ಬಹಳ ಸಂತೋಷ ಎಂದು ಪಂಜಾಬ್ ನ ವಾಹನ ಮಾಲೀಕರು ತಿಳಿಸಿದ್ದಾರೆ
ಸಂಪಾದಕರು: ರಾಮಚಂದ್ರಪ್ಪ ಪೂಜೇರ (ಚನ್ನಮ್ಮನ ಕಿತ್ತೂರು)
