Monday, December 23, 2024
Homeಟಾಪ್ ನ್ಯೂಸ್ಪ್ರವಾಹ ಪೀಡಿತ ತಾಲೂಕುಗಳಿಗೆ ನೋಡಲ್ ಅಧಿಕಾರಿಗಳ ನೇಮಕ:

ಪ್ರವಾಹ ಪೀಡಿತ ತಾಲೂಕುಗಳಿಗೆ ನೋಡಲ್ ಅಧಿಕಾರಿಗಳ ನೇಮಕ:



ಕಲಬುರಗಿ,ಆ.8  : ಭೀಮಾ‌ ನದಿಯಿಂದ ಪ್ರವಾಹಕ್ಕೆ ತುತ್ತಾಗುವ ಅಫಜಲಪೂರ, ಜೇವರ್ಗಿ, ಚಿತ್ತಾಪುರ ಹಾಗೂ ಶಹಾಬಾದ ತಾಲೂಕಿಗೆ ಜಿಲ್ಲಾ ಮಟ್ಟದ ಅಧಿಕಾರಿಯನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಿ ಡಿ.ಸಿ. ಬಿ.ಫೌಜಿಯಾ ತರನ್ನುಮ್ ಆದೇಶಿಸಿದ್ದಾರೆ.

ನೋಡಲ್ ಅಧಿಕಾರಿಗಳು ತಾಲೂಕಿನ ಇತರೆ ಎಲ್ಲಾ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ರಕ್ಷಣಾ ಕಾರ್ಯಚರಣೆ ಮತ್ತು ಕಾಳಜಿ ಕೇಂದ್ರಗಳ ಮೇಲುಸ್ತುವಾರಿ ವಹಿಸುವಂತೆ ಸೂಚಿಸಲಾಗಿದೆ.

ಅಫಜಲಪೂರ ತಾಲೂಕಿಗೆ ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್-8277931500, ಚಿತ್ತಾಪುರ ಮತ್ತು ಶಹಾಬಾದ ತಾಲೂಕಿಗೆ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಅಲ್ಲಾಭಕ್ಷ-9686075599 ಹಾಗೂ ಜೇವರ್ಗಿ ತಾಲೂಕಿಗೆ ತೋಟಗಾರಿಕೆ ಉಪನಿರ್ದೇಶಕ ಸಂತೋಷ ಕುಮಾರ-9448999235 ಇವರನ್ನು ನಿಯೋಜಿಸಲಾಗಿದೆ.

ಹೆಚ್ಚಿನ ಸುದ್ದಿ