ಕರ್ನಾಟಕ ಬೀದಿಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟ ದಿಂದ ಬೀದಿಬದಿ ವ್ಯಾಪಾರಿಗಳಿಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ತರಬೇತಿ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವು ಮೂರು ದಿನಗಳ ಕಾಲ ನಡೆಯಲಿದೆ. ಈ ಕಾರ್ಯಕ್ರಮವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ಆರ್.ದಿನೇಶ್ ಗುಂಡೂರಾವ್ ಉದ್ಘಾಟನೆ ಮಾಡಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟ ರಾಜ್ಯಾಧ್ಯಕ್ಷರು ರಂಗಸ್ವಾಮಿ ಸೇರಿದಂತೆ ಅನೇಕ ಗಣ್ಯರು ಹಾಗೂ ವ್ಯಾಪರಸ್ಥರು ಭಾಗಿಯಾಗಿದ್ದರು.