Wednesday, March 25, 2026
HomeUncategorizedಬೆಳಗಾವಿ ಜಿಲ್ಲೆಯಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಮತ್ತು ಜಿಲ್ಲೆಯಲ್ಲಿ ಸಾಕಷ್ಟು ತೈಲ ದಾಸ್ತಾನು...

ಬೆಳಗಾವಿ ಜಿಲ್ಲೆಯಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಮತ್ತು ಜಿಲ್ಲೆಯಲ್ಲಿ ಸಾಕಷ್ಟು ತೈಲ ದಾಸ್ತಾನು ಲಭ್ಯವಿದೆ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದರು.

ಸಂಪಾದಕರು: ರಾಮಚಂದ್ರಪ್ಪ ಪೂಜೇರ (ಚನ್ನಮ್ಮನ ಕಿತ್ತೂರು)

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಸದ್ಯಕ್ಕೆ ಪೆಟ್ರೋಲ್‌ ಮತ್ತು ಡೀಸೆಲ್‌ನ ಯಾವುದೇ ಕೊರತೆಯಿಲ್ಲ ಎಂಬ ಬಗ್ಗೆ ಮಾಧ್ಯಮ ಪ್ರತಿನಿಧಿಯೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಿ ಜಿಲ್ಲಾಧಿಕಾರಿಗಳು ಮಾತನಾಡಿದರು.
ತೈಲ ಅಭಾವದ ವದಂತಿಗಳಿಂದಾಗಿ ಜನರು ಪೆಟ್ರೋಲ್ ಬಂಕ್‌ಗಳ ಮುಂದೆ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಜಿಲ್ಲೆಯಲ್ಲಿ ಸಾಕಷ್ಟು ತೈಲ ದಾಸ್ತಾನು ಲಭ್ಯವಿದೆ ಎಂದು ಸ್ಪಷ್ಟಪಡಿಸಿದರು

ಜನರು ಗಾಬರಿಯಾಗುವ ಅಗತ್ಯವಿಲ್ಲ ಮತ್ತು ಅಗತ್ಯಕ್ಕಿಂತ ಹೆಚ್ಚು ಸಂಗ್ರಹಿಸಿಟ್ಟುಕೊಳ್ಳಬೇಡಿ ಎಂದು ಮನವಿ ಮಾಡಿ, ಜಿಲ್ಲೆಯ ಎಲ್ಲಾ ಪೆಟ್ರೋಲ್ ಬಂಕ್‌ಗಳಿಗೆ ನಿರಂತರವಾಗಿ ಇಂಧನ ಸರಬರಾಜು ಮಾಡಲಾಗುತ್ತಿದೆ. ವದಂತಿಗಳಿಗೆ ಕಿವಿಗೊಡದೆ ಜಿಲ್ಲಾಡಳಿತ ಜತೆ ಸಹಕರಿಸುವಂತೆ ಮಾನ್ಯ ಜಿಲ್ಲಾಧಿಕಾರಿಗಳು ವಿನಂತಿಸಿದ್ದಾರೆ.

ಹೆಚ್ಚಿನ ಸುದ್ದಿ