Monday, July 20, 2026
Homeಪ್ರಶಸ್ತಿ ಮತ್ತು ಪುರಸ್ಕಾರಗಳುಮಕ್ಕಳ ಸಾಧನೆಗೆ ಪ್ರೋತ್ಸಾಹ ಅಗತ್ಯ, ಬಾಬಾಸಾಹೇಬ ಪಾಟೀಲ.

ಮಕ್ಕಳ ಸಾಧನೆಗೆ ಪ್ರೋತ್ಸಾಹ ಅಗತ್ಯ, ಬಾಬಾಸಾಹೇಬ ಪಾಟೀಲ.

ಚ ಕಿತ್ತೂರು: “ಸಮಾಜದಲ್ಲಿ ಮಕ್ಕಳ ಸಾಧನೆಯನ್ನು ಸೂಕ್ತ ಸಮಯದಲ್ಲಿ ಗುರುತಿಸಿ ಪ್ರೋತ್ಸಾಹಿಸುವುದರಿಂದ, ಅವರಿಗೆ ಭವಿಷ್ಯದಲ್ಲಿ ಇನ್ನಷ್ಟು ದೊಡ್ಡ ಸಾಧನೆಗಳನ್ನು ಮಾಡಲು ಅಪಾರ ಪ್ರೇರಣೆ ಸಿಗುತ್ತದೆ” ಎಂದು ಸ್ಥಳೀಯ ಶಾಸಕ ಬಾಬಾಸಾಹೇಬ ಪಾಟೀಲ ಅವರು ಅಭಿಪ್ರಾಯಪಟ್ಟರು.

​ಇಲ್ಲಿನ ಕಿತ್ತೂರು ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ‘ಪ್ರತಿಭಾ ಪುರಸ್ಕಾರ’ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಸಮಾಜದ ಯುವ ಪೀಳಿಗೆಯನ್ನು ಪ್ರೋತ್ಸಾಹಿಸುವ ಸಂಘದ ಈ ಕಾರ್ಯ ಶ್ಲಾಘನೀಯ ಎಂದರು.

​ಇದೇ ಸಂದರ್ಭದಲ್ಲಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಹೈಕೋರ್ಟ್ ಹಿರಿಯ ನ್ಯಾಯವಾದಿಗಳಾದ ಕೆ. ಎಸ್. ಕೋರಿಶೆಟ್ಟರ ಅವರು, “ಪ್ರಸ್ತುತ ದಿನಗಳಲ್ಲಿ ಒಳಪಂಗಡಗಳು ಪ್ರತ್ಯೇಕ ಸಂಘಟನೆಗಳಾಗಿ ಗುರುತಿಸಿಕೊಳ್ಳುತ್ತಿದ್ದರೂ, ನಾವೆಲ್ಲರೂ ಮೂಲತಃ ಲಿಂಗಾಯತರು ಎನ್ನುವ ವಿಶಾಲವಾದ ಒಗ್ಗಟ್ಟಿನ ಭಾವನೆಯನ್ನು ಎಂದಿಗೂ ಮರೆಯಬಾರದು” ಎಂದು ಸಮಾಜ ಬಾಂಧವರಿಗೆ ಕರೆ ನೀಡಿದರು.

ಎಸ್, ಎಸ್, ಎಲ್, ಸಿ ಹಾಗು ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಹಾಗು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಲವಾರು ಮಹನೀಯರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು.

​ರಾಜಗುರು ಸಂಸ್ಥಾನ ಕಲ್ಮಠದ ಪರಮಪೂಜ್ಯ ಮಡಿವಾಳ ರಾಜಯೋಗೀಂದ್ರ ಮಹಾಸ್ವಾಮಿಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಕಿತ್ತೂರು ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ವೀರಪ್ಪ ಶಹಾಪೂರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

​ಸಮಾರಂಭದಲ್ಲಿ ರಾಜ್ಯ ಬಣಜಿಗ ಸಂಘದ ಅಧ್ಯಕ್ಷರಾದ ಮಲ್ಲಿಕಾರ್ಜುನ ರೂಡಗಿ, ಕಿ.ನಾ.ವಿ.ವ. ಸಂಘದ ಅಧ್ಯಕ್ಷರಾದ ಬಾಬಣ್ಣ ವಳಸಂಗ, ಪ್ರಮುಖರಾದ ಜಗದೀಶ ಘಟನಟ್ಟಿ, ವಿರುಪಾಕ್ಷ ಮಾರಿಹಾಳ, ಮಲ್ಲಿಕಾರ್ಜುನ ಸಾಣಿಕೊಪ್ಪ, ದಿನೇಶ ವಳಸಂಗ, ಮೃತ್ಯುಂಜಯ ಮಾರಿಹಾಳ, ಮಂಜುನಾಥ ಅಂಗಡಿ ಸೇರಿದಂತೆ ಸಮಾಜದ ಪ್ರಮುಖ ಗಣ್ಯರು, ಪಾಲಕರು ಹಾಗೂ ವಿದ್ಯಾರ್ಥಿಗಳು ಬಹುಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಹೆಚ್ಚಿನ ಸುದ್ದಿ