ಸುರೇಶ್ (35) ಕೊಲೆಯಾದ ವ್ಯಕ್ತಿ. ಪೇಂಟಿಂಗ್ ಕೆಲಸ ಮಾಡಿಕೊಂಡಿದ್ದ ಸುರೇಶ್, ನಿತ್ಯ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದ. ಅದೇ ರೀತಿ ಮಂಗಳವಾರವೂ ಕುಡಿದು ಬಂದು ಗಲಾಟೆ ಮಾಡಿದ್ದ. ತಾಯಿಯನ್ನ ಹಿಡಿದು ಹೊಡೆಯುತ್ತಿದ್ದ ಹಿನ್ನೆಲೆಯಲ್ಲಿ ಗಲಾಟೆ ಬಿಡಿಸಲು ತಂದೆ ಮುಂದಾಗಿದ್ದಾರೆ. ಆದರೆ, ಗಲಾಟೆ ವಿಕೋಪಕ್ಕೆ ತಿರುಗಿದಾಗ ತಂದೆ ಮಚ್ಚಿನಿಂದ ಸುರೇಶ್ಗೆ ಹಲ್ಲೆ ಮಾಡಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮಗನನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ, ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ.
ಆನೇಕಲ್ ಸರ್ಕಾರಿ ಆಸ್ಪತ್ರೆ ಶವಗಾರಕ್ಕೆ ಮೃತದೇಹ ರವಾನೆ ಮಾಡಲಾಗಿದ್ದು, ಆನೇಕಲ್ ಪೊಲೀಸರು ಸ್ಥಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವರದಿ : ಲಕ್ಷ್ಮಣ ಕೋಳಿ ಚಿಕ್ಕೋಡಿ
