ಯಾದಗಿರಿ : ಮಲ್ಲಿಕಾರ್ಜುನ ಮುತ್ಯಾ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಯನ್ನು ಗುರುತಿಸಬಹುದಾದ ಯಾವುದೇ ಮಾಹಿತಿಯನ್ನು ಮತ್ತು ಬಾಲಕಿಯ ಕುಟುಂಬ ಸದಸ್ಯರನ್ನು ಒಳಗೊಂಡ ಫೋಟೋ ಹಾಗೂ ಸಂಗ್ರಹಿಸಿ ಇಟ್ಟುಕೊಂಡ ವಿಡಿಯೋ ಕ್ಲಿಪಿಂಗ್ ಸಾಮಾಜಿಕ ಜಾಲತಾಣಗಳಲ್ಲಿ ಅಪಲೋಡ್ ಮಾಡುವುದಾಗಲಿ ಮತ್ತು ಬೇರೆಯವರಿಗೆ ಶೇರ್ ಮಾಡಬಾರದು. ಒಂದು ವೇಳೆ ಮಾಡಿದಲ್ಲಿ ಅಂತವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪೃಥ್ವಿಕ್ ಶಂಕರ್ ಅವರು ತಿಳಿಸಿದ್ದಾರೆ.
ಈ ಕುರಿತು ಯಾದಗಿರಿ ಜಿಲ್ಲೆಯ ಗೋಗಿ ಪೊಲೀಸ್ ಠಾಣೆಯಲ್ಲಿ ದಿನಾಂಕ 25-08-2026 ರಂದು ಫಿರ್ಯಾದಿದಾರರಾದ ಶಹಾಪೂರದ ಅಭಿವೃದ್ಧಿ ಯೋಜನಾಧಿಕಾರಿಗಳಾದ ಮಲ್ಲಣ್ಣ ತಂದೆ ಉಮಾಪತಿ ಎಂಬುವರು ಸಲ್ಲಿಸಿದ ದೂರಿನ ಮೇರೆಗೆ ಮಲ್ಲಿಕಾರ್ಜುನ ಮುತ್ಯಾ ಸಾ: ಮಹಲರೋಜಾ ಇವರ ವಿರುದ್ಧ ಗೋಗಿ ಪೊಲೀಸ್ ಠಾಣೆ ಗುನ್ನೆ ನಂ:25/2026 ಕಲಂ 75(2), ಬಿ.ಎನ್.ಎಸ್ ಕಾಯ್ದೆ-2023 ಮತ್ತು ಕಲಂ 12 ಪೋಕ್ಸೋ ಯಾಕ್ಟ್-2012 ಪ್ರಕಾರ ಪ್ರಕರಣ ದಾಖಲಾಗಿ ತನಿಖೆ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಈ ಪ್ರಕರಣದಕ್ಕೆ ಯಾವುದೇ ಪೋಟೋ ಅಥವಾ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಾದ ವ್ಯಾಟ್ಸ್ ಆಫ್, ಪೇಸ್ಬುಂಕ್, ಇನ್ಸ್ ಗ್ರಾಮ್ ಸೇರಿದಂತೆ ಇನ್ನಿತರೆ ಕಡೆಗಳಲ್ಲಿ ಹಂಚಿಕೊಂಡಲ್ಲಿ ಅಂತವರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರಕಟಣೆ ತಿಳಿಸಿದ್ದಾರೆ.
