ಮುಂಡಗೋಡ : ತಾಲೂಕು ಆಡಳಿತ ಸೌಧ ಮುಂಡಗೋಡ ಕಚೇರಿಯಲ್ಲಿ ಗ್ರೇಡ್ 2 ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತ ಸೇವಾ ನಿವೃತ್ತಿ ಹೊಂದಿದ ಜಿಬಿ ಭಟ್ ಹಾಗೂ ವಿಜಯಪುರ ಜಿಲ್ಲೆಗೆ ವರ್ಗಾವಣೆಯಾದ ಭೂ ದಾಖಲೆಗಳ ಸಹಾಯಕ ನಿರ್ದೇಶಕರಾದ ವಿನೋದ್ ರಾಥೋಡ್ ಅವರನ್ನು ಕಾರ್ಯಾಲಯದ ಸಿಬ್ಬಂದಿಗಳು ಸನ್ಮಾನಿಸಿ ಬೀಳ್ಕೊಡುಗೆ ಸಮಾರಂಭ ನೆರವೇರಿತು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಶಂಕರ್ ಗೌಡಿ. ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸುಭಾಸ್ ಡೋರಿ . ಕಂದಾಯ ಇಲಾಖೆಯ ಸಿಬ್ಬಂದಿಗಳಾದ ರಾಘವೇಂದ್ರ ಗೀ ರೆಡ್ಡಿ. ಸೇರಿದಂತೆ ಕಂದಾಯ ಇಲಾಖೆಯ ಸಿಬ್ಬಂದಿಗಳು ಭಾಗವಹಿಸಿದ್ದರು .
ವರದಿ. ಬಿ ಎಸ್ ತೋಟಯ್ಯನವರು
