ನವದೆಹಲಿ, ಅಕ್ಟೋಬರ್ 11: ಎಸ್‌ಐಆರ್ (SIR) ವಿಚಾರವಾಗಿ ಕಾಂಗ್ರೆಸ್ ಪಕ್ಷವು ನಾಳೆ ನವದೆಹಲಿಯಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಲು ಕರ್ನಾಟಕದ ಸಮಾಜ ಕಲ್ಯಾಣ ಇಲಾಖೆಯ ಸಚಿವ ಕೆ.ಎಚ್. ಮುನಿಯಪ್ಪ ಅವರು ಶನಿವಾರ ರಾಷ್ಟ್ರ ರಾಜಧಾನಿಗೆ ಆಗಮಿಸಿದರು.
ನವದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ಕೆ.ಎಚ್. ಮುನಿಯಪ್ಪ ಅವರು, ಎಸ್‌ಐಆರ್ ಸಂಬಂಧ ಕಾಂಗ್ರೆಸ್ ಪಕ್ಷದ ನಿಲುವು ಹಾಗೂ ಪ್ರತಿಭಟನೆಯ ಉದ್ದೇಶವನ್ನು ವಿವರಿಸಿದರು. ಪ್ರಜಾಪ್ರಭುತ್ವದ ಮೌಲ್ಯಗಳ ರಕ್ಷಣೆ ಮತ್ತು ಜನರ ಹಕ್ಕುಗಳ ಪರವಾಗಿ ಈ ಹೋರಾಟ ನಡೆಯುತ್ತಿದ್ದು, ದೇಶದ ವಿವಿಧ ರಾಜ್ಯಗಳಿಂದ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಕಾಂಗ್ರೆಸ್ ಸಂಸದ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಾಳೆ ನಡೆಯಲಿರುವ ಈ ಪ್ರತಿಭಟನೆಯಲ್ಲಿ ಸಚಿವ ಕೆ.ಎಚ್. ಮುನಿಯಪ್ಪ ಅವರು ಅಧಿಕೃತವಾಗಿ ಪಾಲ್ಗೊಳ್ಳಲಿದ್ದಾರೆ.
