Saturday, May 30, 2026
Homeಜಿಲ್ಲಾ ಸುದ್ದಿಗಳುಬೆಳಗಾವಿಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ನೀಡಲು ಆಗ್ರಹ: ದಲಿತ ಮುಖಂಡ ಮಾಂತೇಶ ಬಾಡಗಿ ಒತ್ತಾಯ

ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ನೀಡಲು ಆಗ್ರಹ: ದಲಿತ ಮುಖಂಡ ಮಾಂತೇಶ ಬಾಡಗಿ ಒತ್ತಾಯ

ಅಥಣಿ: ಮಾನ್ಯ ಡಿ.ಕೆ. ಶಿವಕುಮಾರ್ ಅವರ ಸಂಪುಟದಲ್ಲಿ ಹಿರಿಯ ಶಾಸಕ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ದಲಿತ ಮುಖಂಡ ಮಾಂತೇಶ ಬಾಡಗಿ ಆಗ್ರಹಿಸಿದ್ದಾರೆ.
ಅಥಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಲಕ್ಷ್ಮಣ ಸವದಿ ಅವರು ಈ ಹಿಂದೆ ಉಪ ಮುಖ್ಯಮಂತ್ರಿಯಾಗಿ, ಸಹಕಾರ ಹಾಗೂ ಸಾರಿಗೆ ಸಚಿವರಾಗಿ ಅತ್ಯಂತ ನಿಷ್ಠೆಯಿಂದ ಜನಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ಪ್ರಬಲ ನಾಯಕರಾಗಿರುವ ಅವರು, ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ” ಎಂದು ತಿಳಿಸಿದರು.
“2023ರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಸ್ವಂತ ಕ್ಷೇತ್ರವಷ್ಟೇ ಅಲ್ಲದೆ, ಸುತ್ತಮುತ್ತಲಿನ ಹಲವು ಕ್ಷೇತ್ರಗಳ ಅಭ್ಯರ್ಥಿಗಳ ಗೆಲುವಿಗೆ ಸವದಿ ಅವರು ಶ್ರಮಿಸಿದ್ದಾರೆ. ಅಲ್ಲದೆ, ಇತ್ತೀಚಿನ ಲೋಕಸಭೆ ಚುನಾವಣೆಯಲ್ಲೂ ತಮ್ಮ ಜವಾಬ್ದಾರಿಯಲ್ಲಿದ್ದ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ತಮ್ಮ ಸಂಘಟನಾ ಚತುರತೆಯನ್ನು ಸಾಬೀತುಪಡಿಸಿದ್ದಾರೆ. ಇಂತಹ ಅನುಭವಿ ನಾಯಕರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಿದರೆ ಪಕ್ಷಕ್ಕೆ ಇನ್ನಷ್ಟು ಬಲ ಬರುತ್ತದೆ, ಎಂದು ಮಹಾಂತೆಶ ಬಾಡಗಿ ಅಭಿಪ್ರಾಯಪಟ್ಟಿದ್ದಾರೆ.
ಪಕ್ಷದ ಹೈಕಮಾಂಡ್ ಹಾಗೂ ಡಿ.ಕೆ. ಶಿವಕುಮಾರ್ ಅವರು ಈ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಿ, ಲಕ್ಷ್ಮಣ ಸವದಿ ಅವರಿಗೆ ಸಂಪುಟದಲ್ಲಿ ಅವಕಾಶ ನೀಡಬೇಕೆಂದು ಮನವಿ ಮಾಡಿದ್ದಾರೆ.

ಹೆಚ್ಚಿನ ಸುದ್ದಿ