Friday, June 5, 2026
Homeಜಿಲ್ಲಾ ಸುದ್ದಿಗಳುಉತ್ತರ ಕನ್ನಡವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ

ಹುನಗುಂದ, ಜೂನ್ 5: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಹುನಗುಂದದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಪರಿಸರ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮವನ್ನು ಶಾಲೆಯ ಮುಖ್ಯ ಗುರುಗಳಾದ ಸುಮಿತ್ರಾ ತಳವಾರ ಉದ್ಘಾಟಿಸಿ, ಪರಿಸರ ಸಂರಕ್ಷಣೆ ಹಾಗೂ ಹಸಿರು ಪರಿಸರ ನಿರ್ಮಾಣದ ಮಹತ್ವವನ್ನು ತಿಳಿಸಿದರು. ಈ ವರ್ಷದ ವಿಶ್ವ ಪರಿಸರ ದಿನದ ಸಂದೇಶಕ್ಕೆ ಅನುಗುಣವಾಗಿ ಹವಾಮಾನ ಬದಲಾವಣೆಯ ಪರಿಣಾಮಗಳನ್ನು ತಗ್ಗಿಸಲು ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.

ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಗೆ ಸಂಬಂಧಿಸಿದ ಘೋಷಣೆಗಳನ್ನು ಕೂಗಿ ಜಾಗೃತಿ ಮೂಡಿಸಿದರು. ಜೊತೆಗೆ ಭಾಷಣ, ಪ್ರಬಂಧ ಹಾಗೂ ಚಿತ್ರಕಲೆ ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಭಾಗವಹಿಸಿದರು. ಶಾಲಾ ಆವರಣದಲ್ಲಿ ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು ಹಾಗೂ ವಿದ್ಯಾರ್ಥಿಗಳು ಸಸಿ ನೆಡುವ ಮೂಲಕ ಹಸಿರು ಪರಿಸರ ನಿರ್ಮಾಣದ ಸಂಕಲ್ಪ ಕೈಗೊಂಡರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆಂಜಡಯ್ಯ ಹಿರೇಮಠ ವಹಿಸಿದ್ದರು. ಅತಿಥಿಗಳಾಗಿ ಬಸವಣ್ಣೆಪ್ಪ ನಡಮನಿ ಹಾಗೂ ಹನೇಬಾ ಬುಡ್ನನವರ ಭಾಗವಹಿಸಿ, ಮರಗಳನ್ನು ಬೆಳೆಸುವುದು, ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವುದು ಮತ್ತು ಸ್ವಚ್ಛ ಪರಿಸರ ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ತನುಜಾ ಗುನಗಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸ್.ವಿ. ಮಾದರ ಕಾರ್ಯಕ್ರಮವನ್ನು ನಿರೂಪಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಹೆಚ್ಚಿನ ಸುದ್ದಿ