Thursday, April 23, 2026
Homeಅಪಘಾತಶಾಂತಪುರ ಬಳಿ ಭೀಕರ ಅಪಘಾತ: ಕಾರಿನಲ್ಲಿದ್ದ ಆರು ಮಂದಿ ದಾರುಣ ಸಾವು

ಶಾಂತಪುರ ಬಳಿ ಭೀಕರ ಅಪಘಾತ: ಕಾರಿನಲ್ಲಿದ್ದ ಆರು ಮಂದಿ ದಾರುಣ ಸಾವು

ಯಾದಗಿರಿ: ಬೆಂಗಳೂರಿನಿಂದ ಕಲಬುರ್ಗಿಯತ್ತ ಸಾಗುತ್ತಿದ್ದ ವಿ.ಆರ್.ಎಲ್ ಖಾಸಗಿ ಬಸ್ ಮತ್ತು ಕಾರಿನ ನಡುವೆ ಸುರಪುರ ಮತಕ್ಷೇತ್ರದ ಶಾಂತಪುರ-ತಿಂಥಣಿ ರಾಜ್ಯ ರಸ್ತೆ ಬಳಿ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ದುರಂತದ ಮಾಹಿತಿ ತಿಳಿದ ತಕ್ಷಣ ಸುರಪುರ ಕ್ಷೇತ್ರದ ಶಾಸಕ ರಾಜಾ ವೇಣುಗೋಪಾಲ ನಾಯಕ ಅವರು ಘಟನೆ ಸ್ಥಳಕ್ಕೆ ಭೇಟಿ ನೀಡಿ ಮೃತರ ಕುಟುಂಬಸ್ಥರ ದುಃಖದಲ್ಲಿ ಪಾಲ್ಗೊಂಡು ಕಂಬನಿ ಮಿಡಿದರು. ಗಾಯಗೊಂಡವರಿಗೆ ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಅಗತ್ಯ ಚಿಕಿತ್ಸೆ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಉಳಿದ ಪ್ರಯಾಣಿಕರಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ.
ಘಟನಾ ಸ್ಥಳಕ್ಕೆ ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಹಾಗೂ ಡಿವೈಎಸ್ಪಿ ಜಾವಿದ್ ಇನಾಮ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತದ ಕಾರಣಗಳ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಹೆಚ್ಚಿನ ಸುದ್ದಿ