
ಲಿಂಗಸುಗೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಲಿಂಗಸುಗೂರು ವತಿಯಿಂದ 2025-26ನೇ ಶೈಕ್ಷಣಿಕ ವರ್ಷದ ಪ್ರವೇಶಾತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಈ ಪ್ರಯುಕ್ತ ಇಂದು ಸರ್ಕಾರಿ ಪದವಿ ಪೂರ್ವ ಕಾಲೇಜು ನಾಗರಾಳ ಹಾಗೂ ಖೈರವಾಡಗಿ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಬಗ್ಗೆ ಮಾಹಿತಿ ನೀಡಲಾಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಸಂಚಾಲಕರಾದ ಡಾ. ಪರಮಾನಂದ ಅವರು ಪ್ರವೇಶಾತಿ ಅಭಿಯಾನದ ಪ್ರಸ್ತಾವಿಕ ಭಾಷಣ ಮಾಡಿದರು. ಕಾಲೇಜಿನ ಶೈಕ್ಷಣಿಕ ಗುಣಮಟ್ಟ, ಬೋಧನಾ ವಿಧಾನಗಳು, ಸೌಲಭ್ಯಗಳು ಹಾಗೂ ಆಧುನಿಕ ತಂತ್ರಜ್ಞಾನ ಸೇವೆಗಳ ಬಗ್ಗೆ ಪ್ರಾಂಶುಪಾಲರಾದ ಡಾ. ಹನುಮಂತಪ್ಪ ಅವರು ವಿವರಿಸಿದರು.

ಇದೇ ಸಂದರ್ಭದಲ್ಲಿ ಐ.ಕ್ಯೂ.ಎ.ಸಿ ಸಂಯೋಜಕರಾದ ಗಣೇಶ್, ಸಹ ಸಂಯೋಜಕರಾದ ನವೀನ್ ಕುಮಾರ್, ನಾಗರಾಳ ಹಾಗೂ ಖೈರವಾಡಗಿ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
