ಸಿಂದಗಿ: ನಾಳೆ ದಿನಾಂಕ 28/06/2026 ರಂದು ಬೆಳಿಗ್ಗೆ 11:00 ಗಂಟೆಗೆ ಸಿಂದಗಿಯಲ್ಲಿ ತಳವಾರ ಸಮಾಜದ ಬಹುನಿರೀಕ್ಷಿತ ‘ತಳವಾರ ಸಮಾಜ ಭವನ’ದ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಲಿದೆ.
ಈ ಸಮಾರಂಭದಲ್ಲಿ ಸಿಂದಗಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಅಶೋಕ ಮನಗೂಳಿ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ, ಭೂಮಿಪೂಜೆಯನ್ನು ನೆರವೇರಿಸಿ ಕೊಡಲಿದ್ದಾರೆ. ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಶ್ರೀ ಶರಣಪ್ಪಣ್ಣಾ ಸುಣಗಾರ ಅವರು ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ ತಳವಾರ ಜಾತಿ ಜನಾಂಗ ಮುಖಂಡರು, ಪ್ರಮುಖ ನಾಯಕರು ತಳವಾರ ಸಮಾಜದ ಹೋರಟಗಾರರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಸಮಾಜದ ಅಭಿವೃದ್ಧಿ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಕೇಂದ್ರ ಬಿಂದುವಾಗಿ ಕಾರ್ಯನಿರ್ವಹಿಸಲಿರುವ ಈ ಸಮಾಜ ಭವನದ ನಿರ್ಮಾಣ ಕಾರ್ಯವು ನಾಳೆ ಅಧಿಕೃತವಾಗಿ ಪ್ರಾರಂಭವಾಗಲಿದೆ. ಈ ಮಹತ್ವದ ಕಾರ್ಯಕ್ರಮದಲ್ಲಿ ಸಿಂದಗಿಯ ಸಮಸ್ತ ತಳವಾರ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಆಯೋಜಕರು ಮನವಿ ಮಾಡಿದ್ದಾರೆ.
