ಬಳ್ಳಾರಿ: ಇಂದು ಬಳ್ಳಾರಿ ತಾಲೂಕಿನ ಸಿರಿವಾರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಅವರು, ಶಾಲೆಯ ಕಟ್ಟಡ, ತರಗತಿ ಕೊಠಡಿಗಳು ಹಾಗೂ ಲಭ್ಯವಿರುವ ಮೂಲಸೌಕರ್ಯಗಳನ್ನು ಪರಿಶೀಲಿಸಿದರು.
ಶಾಲಾ ಆವರಣವನ್ನು ವೀಕ್ಷಿಸಿದ ಸಂದರ್ಭದಲ್ಲಿ, ಶಾಲೆಯ ಮೇಲ್ಛಾವಣಿಯಲ್ಲಿ ನೀರು ಸೋರಿಕೆಯಾಗುತ್ತಿರುವ ಗಂಭೀರ ಸಮಸ್ಯೆಯನ್ನು ಗಮನಿಸಿದರು. ಈ ಬಗ್ಗೆ ತಕ್ಷಣವೇ ಸ್ಪಂದಿಸಿದ ಅವರು, ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ, ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಚಟುವಟಿಕೆಗಳಿಗೆ ಯಾವುದೇ ತೊಂದರೆಯಾಗದಂತೆ, ಕೂಡಲೇ ಅಗತ್ಯ ದುರಸ್ತಿ ಕಾರ್ಯವನ್ನು ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಎನ್. ರವಿಕುಮಾರ್ ಅವರು, “ವಿದ್ಯಾರ್ಥಿಗಳಿಗೆ ಉತ್ತಮ ಹಾಗೂ ಸುರಕ್ಷಿತ ಶೈಕ್ಷಣಿಕ ವಾತಾವರಣ ಕಲ್ಪಿಸುವುದು ನಮ್ಮ ಮೊದಲ ಆದ್ಯತೆಯಾಗಿದೆ. ಶಾಲೆಯ ಸಮಗ್ರ ಅಭಿವೃದ್ಧಿಗೆ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರವನ್ನು ನೀಡಲು ನಾವು ಬದ್ಧರಾಗಿದ್ದೇವೆ” ಎಂದು ಭರವಸೆ ನೀಡಿದರು.
ಈ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ವೈ.ಎಂ. ಸತೀಶ್, ಶಾಲೆಯ ಮುಖ್ಯೋಪಾಧ್ಯಾಯರು, ಸಹಶಿಕ್ಷಕರು, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು
