Tuesday, March 3, 2026
HomeUncategorizedಹನೂರು ಕುಡಿಯುವ ನೀರು ಸಮಸ್ಯೆ: ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ರೈತ ಸಂಘದಿಂದ ಮನವಿ

ಹನೂರು ಕುಡಿಯುವ ನೀರು ಸಮಸ್ಯೆ: ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ರೈತ ಸಂಘದಿಂದ ಮನವಿ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ದಶಕಗಳ ಕಾಲದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ, ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು.
ಹನೂರು ತಾಲೂಕಿನಿಂದ ಪಾದಯಾತ್ರೆಯ ಮೂಲಕ ಆಗಮಿಸಿದ ರೈತ ಮುಖಂಡರು, ಮುಖ್ಯಮಂತ್ರಿಗಳನ್ನು ಭೇಟಿಯಾಗಿ ತಾಲೂಕಿನ ಜ್ವಲಂತ ಸಮಸ್ಯೆಗಳ ಕುರಿತು ಸುದೀರ್ಘ ಚರ್ಚೆ ನಡೆಸಿದರು. ವಿಶೇಷವಾಗಿ ಹನೂರು ಭಾಗದ ಜನರಿಗೆ ಕುಡಿಯುವ ನೀರಿನ ಯೋಜನೆಯನ್ನು ತ್ವರಿತವಾಗಿ ಅನುಷ್ಠಾನಗೊಳಿಸಬೇಕು ಮತ್ತು ಇದಕ್ಕಾಗಿ ವಿಸ್ತೃತ ಯೋಜನಾ ವರದಿ (DPR) ಗೆ ಕೂಡಲೇ ಅನುಮೋದನೆ ನೀಡಬೇಕು ಎಂದು ಆಗ್ರಹಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕ ಬಿ.ಆರ್.ಪಾಟೀಲ್, ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ಗೌರವಾಧ್ಯಕ್ಷ ಚಾಮರಸ ಮಾಲಿ ಪಾಟೀಲ, ಪ್ರಧಾನ ಕಾರ್ಯದರ್ಶಿ ಎನ್.ಡಿ.ವಸಂತಕುಮಾರ್, ಮಹಿಳಾ ವಿಭಾಗದ ಕಾರ್ಯದರ್ಶಿಗಳಾದ ನೇತ್ರಾವತಿ, ರಮ್ಯ ರಾಮಣ್ಣ ಸೇರಿದಂತೆ ಹಲವು ಪದಾಧಿಕಾರಿಗಳು ಉಪಸ್ಥಿತರಿದ್ದರು.
ರೈತರ ಮನವಿಯನ್ನು ಸ್ವೀಕರಿಸಿದ ಮುಖ್ಯಮಂತ್ರಿಗಳು, ಹನೂರು ತಾಲೂಕಿನ ಕುಡಿಯುವ ನೀರಿನ ಸಮಸ್ಯೆಯ ಗಂಭೀರತೆಯನ್ನು ಅರಿತಿದ್ದು, ಶೀಘ್ರದಲ್ಲೇ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಹೆಚ್ಚಿನ ಸುದ್ದಿ