ಸಿಂದಗಿ: ಪಟ್ಟಣದ ಆರಾಧ್ಯ ದೇವತೆ ಶ್ರೀ ಹಾಳಲ್ಲಿ ಲಕ್ಕಮ್ಮ ದೇವಿಯ ಜಾತ್ರಾ ಮಹೋತ್ಸವವು ಮಂಗಳವಾರ ಅತ್ಯಂತ ಸಡಗರ-ಸಂಭ್ರಮದಿಂದ ಜರುಗಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಸಿಂದಗಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಹಣಮಂತ ಸುಣಗಾರ ಅವರು ಭಾಗವಹಿಸಿ ಶ್ರೀದೇವಿಯ ದರ್ಶನ ಪಡೆದರು.
ದೇವಸ್ಥಾನಕ್ಕೆ ಭೇಟಿ ನೀಡಿದ ಸುಣಗಾರ ಅವರು ವಿಶೇಷ ಪೂಜೆ ಸಲ್ಲಿಸಿ, ತಾಲೂಕಿನ ಜನತೆಗೆ ಶ್ರೇಯಸ್ಸಾಗಲಿ ಎಂದು ಪ್ರಾರ್ಥಿಸಿದರು. ಇದೇ ಸಂದರ್ಭದಲ್ಲಿ ದೇವಸ್ಥಾನ ಟ್ರಸ್ಟ್ ಕಮಿಟಿಯ ವತಿಯಿಂದ ಅಧ್ಯಕ್ಷರನ್ನು ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಗ್ಯಾರೆಂಟಿ ಯೋಜನಾ ಸಮಿತಿ ಸದಸ್ಯರಾದ ಪರಶುರಾಮ ಉಪ್ಪಾರ್, ಕಾಂಗ್ರೆಸ್ ಮುಖಂಡರಾದ ರಫೀಕ್ ಆಲಮೇಲ, ಪ್ರವೀಣ್ ಬೋರಗಿ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು. ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ವಿವಿಧ ಧಾರ್ಮಿಕ ವಿಧಿವಿಧಾನಗಳಲ್ಲಿ ಗ್ರಾಮದ ನೂರಾರು ಸದ್ಭಕ್ತರು ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾದರು
