Friday, April 10, 2026
Homeಉದ್ಯೋಗಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನ

ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನ

ಕಾರವಾರ, ಏ.10:- ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ತರಬೇತಿ ಸಂಸ್ಥೆಯಲ್ಲಿ 18 ರಿಂದ 50 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗ ಯುವಕ ಯುವತಿಯರಿಗಾಗಿ ಏಪ್ರಿಲ್ ಕೊನೆಯ ವಾರದಲ್ಲಿ 12 ದಿನಗಳ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.


ಆಸಕ್ತರು
www.rsetihaliyal.org
ಮತ್ತು https://forms.gle/5qMgpA1XhR4RaBbk8
ಮೂಲಕ ಅರ್ಜಿ ಸಲ್ಲಿಸಬಹುದು.

ತರಬೇತಿ ಅವಧಿಯಲ್ಲಿ ಊಟ ವಸತಿ ಸಂಪೂರ್ಣ ಉಚಿತವಾಗಿರುತ್ತದೆ. ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು. ತರಬೇತಿಯಲ್ಲಿ ಕೌಶಲ್ಯ, ಸಾಧನಾ ಪ್ರೇರಣಾ ತರಬೇತಿ, ಉದ್ಯಮಶೀಲತೆಯ ದಕ್ಷ ಗುಣಗಳು, ಹೊಸ ಉದ್ಯಮದ ಸ್ಥಾಪನೆ ಬಗ್ಗೆ, ಮಾಹಿತಿ ಮಾರುಕಟ್ಟೆ ಸಮೀಕ್ಷೆ, ಮಾರಾಟದ ತಂತ್ರಗಳು, ಉದ್ಯಮಗಳಿಂದ ಅನುಭವ ಹಂಚಿಕೆ, ಕ್ಷೇತ್ರ ಭೇಟಿ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ, ಬ್ಯಾಂಕಿನಿಂದ ಸಾಲ ಪಡೆದು ಸ್ವಉದ್ಯೋಗ ಪ್ರಾರಂಭಿಸಲು ಬೇಕಾದ ಜ್ಞಾನ, ಸರ್ಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಇನ್ನಿತರ ಮಾಹಿತಿಗಳನ್ನು ಉಚಿತವಾಗಿ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 8970145354, 9483485489, ನ್ನು ಸಂಪರ್ಕಿಸಬಹುದು ಎಂದು ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಸುದ್ದಿ