Saturday, August 1, 2026
HomeUncategorized5 ಲಕ್ಷ ಜನರಿಗೆ ಉದ್ಯೋಗ, 1.5 ಕೋಟಿ ಮಾನವದಿನ ಸೃಷ್ಟಿಗೆ ಅವಕಾಶ:ಈಶ್ವರ ಖಂಡ್ರೆ

5 ಲಕ್ಷ ಜನರಿಗೆ ಉದ್ಯೋಗ, 1.5 ಕೋಟಿ ಮಾನವದಿನ ಸೃಷ್ಟಿಗೆ ಅವಕಾಶ:ಈಶ್ವರ ಖಂಡ್ರೆ

ಉದ್ಯೋಗ ಖಾತ್ರಿಗೆ ಹಣದ ಕೊರತೆ ಇಲ್ಲ:ಈಶ್ವರ ಖಂಡ್ರೆ

ಗುಳೆ ಹೋಗುವ ಅಗತ್ಯವಿಲ್ಲ, ದುಡಿಯುವ ಕೈಗೆ ಉದ್ಯೋಗ:ಈಶ್ವರ ಖಂಡ್ರೆ

ವಿಬಿಜಿ ರಾಮ್ ಜಿ ಪ್ರಥಮ ತ್ರೈಮಾಸಿಕಕ್ಕೆ ರೂ.2900 ಕೋಟಿ:ಈಶ್ವರ ಖಂಡ್ರೆ
ಬೆಂಗಳೂರು, ಜು.27: ಜುಲೈ 1ರಿಂದ ಜಾರಿಗೆ ತರಲಾಗಿರುವ ಮನ್ರೇಗಾದ ಬದಲಾದ ರೂಪ ವಿಬಿಜಿ ರಾಮ್ ಜಿಗೆ ಹಣದ ಕೊರತೆ ಇಲ್ಲ. ಪ್ರಥಮ ತ್ರೈಮಾಸಿಕಕ್ಕೆ 2900 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.
ವಿಕಾಸಸೌಧದಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 60:40ರ ಅನುಪಾತದಲ್ಲಿ ಕೇಂದ್ರ ಸರ್ಕಾರ ಮೊದಲ ತ್ರೈಮಾಸಿಕಕ್ಕೆ 1700 ಕೋಟಿ ರೂ., ರಾಜ್ಯ ಸರ್ಕಾರ 1200 ಕೋಟಿ ಹಣವನ್ನು ನೀಡಿದೆ. ಪ್ರತಿ ತಿಂಗಳು 5 ಲಕ್ಷ ಗ್ರಾಮೀಣರಿಗೆ ಉದ್ಯೋಗ ನೀಡಿ, 1.5 ಕೋಟಿ ಮಾನವದಿನ ಉದ್ಯೋಗ ಸೃಷ್ಟಿ ಮಾಡುವಷ್ಟು ಅನುದಾನವಿದೆ ಎಂದರು.
ಕೃಷಿ ಹೊಂಡ ನಿರ್ಮಾಣ, ಹನಿ ನೀರಾವರಿ, ಕೆರೆ ಕಾಲುವೆ ಅಭಿವೃದ್ಧಿ, ಚೆಕ್ ಡ್ಯಾಂ ಇತ್ಯಾದಿ ವೈಯಕ್ತಿಕ ಮತ್ತು ಸಮುದಾಯ ಕಾಮಗಾರಿ ಕೈಗೊಳ್ಳಲು ಅವಕಾಶವಿದ್ದು, ಉದ್ಯೋಗ ಕೇಳಿ ಬರುವ ಪ್ರತಿಯೊಬ್ಬರಿಗೂ, ಇರುವಲ್ಲೇ ಉದ್ಯೋಗ ನೀಡುವಂತೆ ಸಿಇಓಗಳಿಗೆ ಮತ್ತು ಗ್ರಾಮ ಮಟ್ಟದ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದರು.

ಹೆಚ್ಚಿನ ಸುದ್ದಿ