ಬೀದರ್: ಗುತ್ತಿಗೆದಾರನಿಂದ 50 ಸಾವಿರ ರೂ. ಲಂಚ ಪಡೆಯುವಾಗ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ರಾಮಲಿಂಗಪ್ಪ ಬಿರಾದರ್ ಮತ್ತು ಸಿಬ್ಬಂದಿ ಬಾಬು ಅವರು ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಬೀದರ್ ಜಿಲ್ಲಾ ಪಂಚಾಯತಿ ಆವರಣದಲ್ಲಿರುವ ಕಚೇರಿ ಮೇಲೆ ಗುರುವಾರ ದಾಳಿ ಮಾಡಿದ ಲೋಕಾಯುಕ್ತ ಪೊಲೀಸರು, ಕಾಮಗಾರಿ ಬಿಲ್ ವಿಚಾರಕ್ಕೆ ಗುತ್ತಿಗೆದಾರನಿಂದ 50 ಸಾವಿರ ರೂ. ಲಂಚ ಪಡೆಯುವಾಗ ಇಇ ರಾಮಲಿಂಗಪ್ಪ ಬಿರಾದರ್ ಹಾಗೂ ಸಿಬ್ಬಂದಿ ಬಾಬು ಲೋಕಾಯುಕ್ತರಿಗೆ ಸಿಕ್ಕಿ ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ. ಲೋಕಾಯುಕ್ತ ಎಸ್‌ಪಿ ಸಿದ್ದರಾಜು ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಹನುಮಂತರಾಯ್ ನೇತೃತ್ವದ ತಂಡದಿಂದ ದಾಳಿ ನಡೆಸಿದ್ದು, ದಾಖಲೆ ಪರಿಶೀಲನೆ ನಡೆಸಲಾದೆ ಎಂದು ತಿಳಿದು ಬಂದಿದೆ
